ಕಳ್ಳತನ ಆರೋಪಿಗೆ ಗುಂಡಿಕ್ಕಿ ಬಂಧನ

Update: 2020-09-24 17:45 GMT

ಬೆಂಗಳೂರು, ಸೆ.24: ಕಳವು ಆರೋಪ ಪ್ರಕರಣ ಸಂಬಂಧ ವ್ಯಕ್ತಿಯೋರ್ವನ ಕಾಲಿಗೆ ಪೊಲೀಸರು ಪಿಸ್ತೂಲಿನಿಂದ ಗುಂಡು ಹಾರಿಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕೃಷ್ಣ(32) ಎಂಬಾತ ಬಂಧಿತ ಆರೋಪಿಯಾಗಿದ್ದು, ಘಟನೆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಲೆಕ್ಟ್ರಾನಿಕ್ ಸಿಟಿ ಠಾಣಾ ಪೊಲೀಸರು ತಿಳಿಸಿದ್ದಾರೆ.

ಕಳವು ಇನ್ನಿತರೆ ಪ್ರಕರಣಗಳ ಸಂಬಂಧ ಆರೋಪಿ ಕೃಷ್ಣ ಮೇಲೆ ಮೊಕದ್ದಮೆಗಳು ದಾಖಲಾಗಿದ್ದು, ಈತ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಗುರುವಾರ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಬೆಟ್ಟದಾಸನಪುರ ಬಳಿ ನೆಲೆಸಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು ಬಂಧಿಸಲು ಹೋದಾಗ ಹಲ್ಲೆ ನಡೆಸಲು ಮುಂದಾಗಿದ್ದಾನೆ ಎನ್ನಲಾಗಿದೆ.

ಈ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಪಿಸ್ತೂಲಿನಿಂದ ಗುಂಡು ಹಾರಿಸಿ ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News