ಕ್ರಷರ್ ಕಾಯ್ದೆ ತಿದ್ದುಪಡಿ ಅಧಿವೇಶನದಲ್ಲಿ ಚರ್ಚೆ: ಪಿಐಎಲ್ ವಿಚಾರಣೆ ಮುಂದೂಡಿದ ಹೈಕೋರ್ಟ್

Update: 2020-09-24 18:00 GMT

ಬೆಂಗಳೂರು, ಸೆ.24: ಜಲ್ಲಿ ಕ್ರಷರ್ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿರುವ ವಿಚಾರ ವಿಧಾನಸಭೆ ಅಧಿವೇಶನದಲ್ಲಿ ಚರ್ಚೆಯಾಗಲಿದೆ ಎಂದು ಸರಕಾರದ ಪರ ವಕೀಲರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಸಂಬಂಧ ದಾಖಲಾಗಿರುವ ಪಿಐಎಲ್ ಅರ್ಜಿ ವಿಚಾರಣೆಯನ್ನು ಮುಂದೂಡಿದೆ.

ಈ ಕುರಿತು ಚಿಕ್ಕಬಳ್ಳಾಪುರದ ಪಟ್ರೇನಹಳ್ಳಿಯ ಆಂಜನೇಯರೆಡ್ಡಿ ದಾಖಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರಕಾರದ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಕಾಯ್ದೆಗೆ ತಿದ್ದುಪಡಿ ತಂದಿರುವ ವಿಚಾರವಾಗಿ ಅಧಿವೇಶನದಲ್ಲಿ ಚರ್ಚೆ ನಡೆಯಲಿದೆ ಎಂದರು.

ಹೇಳಿಕೆ ದಾಖಲಿಸಿಕೊಂಡ ಪೀಠ, ಸುಗ್ರೀವಾಜ್ಢೆ ಸಂಬಂಧ ಅಧಿವೇಶನದಲ್ಲಿ ಯಾವ ನಿಲುವು ಕೈಗೊಳ್ಳಲಾಗುತ್ತದೆ ಎಂಬುದನ್ನು ತಿಳಿದು, ನಂತರ ವಿಚಾರಣೆ ಮುಂದುವರಿಸುವುದು ಸೂಕ್ತವೆಂದು ಅಭಿಪ್ರಾಯಪಟ್ಟು ವಿಚಾರಣೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News