ಕೊರೋನದಿಂದ ಪರಮಾಣು ವಿಜ್ಞಾನಿ ಶೇಖರ್ ಬಸು ನಿಧನ

Update: 2020-09-24 18:14 GMT

ಹೊಸದಿಲ್ಲಿ, ಸೆ. 24: ಪರಮಾಣು ಇಂಧನ ಆಯೋಗದ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಪರಮಾಣು ವಿಜ್ಞಾನಿ ಡಾ. ಶೇಖರ್ ಬಸು (68) ಕೊರೋನ ಸೋಂಕಿನಿಂದ ಕೊಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾರೆ.

ಡಾ. ಬಸು ಅವರಿಗೆ 2014ರಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿತ್ತು. ಮೂತ್ರಕೋಶದ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಕೊರೋನ ಸೋಂಕಿಗೆ ಒಳಗಾಗಿದ್ದರು. ಅವರು ಗುರುವಾರ ಮುಂಜಾನೆ 4.50ಕ್ಕೆ ಮೃತಪಟ್ಟಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಮೆಕಾನಿಕಲ್ ಎಂಜಿನಿಯರ್ ಆಗಿದ್ದ ಡಾ. ಬಸು ಅವರು ಪರಮಾಣು ಇಂಧನ ಕಾರ್ಯಕ್ರಮಗಳ ಮೂಲಕ ದೇಶಕ್ಕೆ ದೊಡ್ಡ ಮಟ್ಟದ ಕೊಡುಗೆ ನೀಡಿದ್ದಾರೆ. ಭಾರತದ ಮೊದಲ ಪರಮಾಣು ಸಾಮರ್ಥ್ಯದ ಜಲಾಂತರ್ಗಾಮಿ ಐಎನ್‌ಎಸ್ ಅರಿಹಂತ್‌ಗೆ ಅತಿ ಸಂಕೀರ್ಣ ರಿಯಾಕ್ಟರ್ ಅನ್ನು ಅಳವಡಿಸಿದ ಪ್ರವರ್ತಕರಾಗಿ ಅವರು ಗುರುತಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News