ರಾಜಧಾನಿಯಲ್ಲಿ 4,192 ಕೊರೋನ ಪ್ರಕರಣಗಳು ದೃಢ: 24 ಮಂದಿ ಮೃತ್ಯು

Update: 2020-09-24 18:25 GMT

ಬೆಂಗಳೂರು, ಸೆ.24: ನಗರದಲ್ಲಿ ಗುರುವಾರ ಒಂದೆ ದಿನ 4,192 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 3,854 ಸೋಂಕಿತರು ಆಸ್ಪತ್ರೆಯಿಂದ ಮನೆಗೆ ತೆರಳಿದ್ದು, ಚಿಕಿತ್ಸೆಗೆ ಸ್ಪಂದಿಸದೆ 24 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 2,08,467 ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 2,762 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,65,419 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 40,285 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 2,57,531 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News