ದ.ಕ. ಜಿಲ್ಲೆಯ ಪ್ರತೀ ಗ್ರಾಪಂನಲ್ಲಿ ಕೋವಿಡ್ ತಪಾಸಣೆ: ಯಾರಿಗೆಲ್ಲ ಕಡ್ಡಾಯ?

Update: 2020-09-25 06:57 GMT

ಮಂಗಳೂರು, ಸೆ.25: ದ.ಕ. ಜಿಲ್ಲೆಯಲ್ಲಿ ರೋಗಬಾಧಿತರು, 60 ವರ್ಷ ಮೇಲ್ಪಟ್ಟವರು ಹಾಗೂ 10 ವರ್ಷದೊಳಗಿನ ಎಲ್ಲ ಮಕ್ಕಳನ್ನು ಕಡ್ಡಾಯವಾಗಿ ಒಂದು ವಾರದೊಳಗೆ ಕೋವಿಡ್ ಪರೀಕ್ಷೆಗೆ ಒಳಪಡಿಸುವಂತೆ  ಜಿಪಂ ಸಿಇಒ ಆರ್.ಸೆಲ್ವಮಣಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಸೂಚಿಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ಕೋವಿಡ್-19 ಖಚಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅದರ ನಿಯಂತ್ರಣ ಮತ್ತು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು. ರೋಗಬಾಧಿತರು, 60 ವರ್ಷ ಮೇಲ್ಪಟ್ಟವರು ಹಾಗೂ 10 ವರ್ಷದೊಳಗಿನ ಎಲ್ಲ ಮಕ್ಕಳನ್ನು ಕಡ್ಡಾಯವಾಗಿ ಸೋಂಕಿನ ತಪಾಸಣೆ ನಡೆಸಬೇಕು. ಈ ಬಗ್ಗೆ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳಿಗೆ ಸಿಇಒ ಸೂಚಿಸಿದ್ದಾರೆ.

ಜಿಲ್ಲೆಯಲ್ಲಿ ಶಿಬಿರ ನಡೆಯುವ ದಿನಾಂಕ ಮತ್ತು ಸ್ಥಳಗಳ ವಿವರ ಈ ಕೆಳಗಿನಂತಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News