ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ

Update: 2020-09-25 10:53 GMT

 ಚೆನ್ನೈ, ಸೆ.25: ಖ್ಯಾತ ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಇಂದು ಮಧ್ಯಾಹ್ನ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.

‌ಅವರು ಆಗಸ್ಟ್ 5 ರಂದು ಕೋವಿಡ್ ಸೋಂಕು ದೃಢಪಟ್ಟ ಬಳಿಕ ಚೆನ್ನೈನ ಎಂಜಿಎಂ ಹೆಲ್ತ್ ಕೇರ್ಗೆ ದಾಖಲಾಗಿದ್ದರು. ಸೆಪ್ಟಂಬರ್ 8 ರಂದು ನಡೆಸಲಾಗಿರುವ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿತ್ತು. ಶ್ವಾಸಕೋಶದ ಸಮಸ್ಯೆಯ ಕಾರಣಕ್ಕೆ ವೆಂಟಿಲೇಟರ್ ವ್ಯವಸ್ಥೆಯಲ್ಲೇ ಇದ್ದರು.

ಸಂಗೀತ ಪ್ರೇಮಿಗಳಲ್ಲಿ 'ಎಸ್‌ಪಿಬಿ' ಎಂದೇ ಖ್ಯಾತಿ ಪಡೆದಿದ್ದ ಬಾಲಸುಬ್ರಹ್ಮಣ್ಯಂ 16 ಭಾಷೆಗಳಲ್ಲಿ ಸಾವಿರಾರು ಹಾಡುಗಳನ್ನು ಹಾಡಿದ್ದಾರೆ. ಆರು ಬಾರಿ ರಾಷ್ಟ್ರೀಯ ಪ್ರಶಸ್ತಿಗೂ ಪಾತ್ರರಾಗಿದ್ದರು. ಎ.ಆರ್. ರೆಹಮಾನ್ ಹಾಗೂ ಇಳಯ ರಾಜ ಸಂಯೋಜನೆಯ ಸಂಗೀತಕ್ಕೆ ಧ್ವನಿಯಾಗಿದ್ದರು.

ಎಸ್.‌ಪಿ.ಬಿ. ಗಾಯಕ ಮಾತ್ರವಲ್ಲ ನಟನೆಯಲ್ಲೂ ಸೈ ಎನಿಸಿಕೊಂಡಿದ್ದರು. ನಿರ್ಮಾಪಕನಾಗಿಯೂ ಗುರುತಿಸಿಕೊಂಡಿದ್ದರು. ಪದ್ಮಶ್ರೀ ಹಾಗೂ ಪದ್ಮಭೂಷಣ ಪ್ರಶಸ್ತಿಗೆ ಪಾತ್ರರಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News