ಬೆಳ್ತಂಗಡಿಯಲ್ಲಿ ಸಾಂಕೇತಿಕ ರಸ್ತೆ ತಡೆ

Update: 2020-09-25 08:23 GMT

ಬೆಳ್ತಂಗಡಿ, ಸೆ.25: ಕೇಂದ್ರ ಸರಕಾರದ ರೈತ ವಿರೋಧಿ ಭೂಮಸೂದೆ ತಿದ್ದುಪಡಿ ಕಾಯ್ದೆ, ಅಗತ್ಯ ವಸ್ತು ನಿರ್ವಾಹಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ ಹಿಂಪಡೆಯುವ ಮೊದಲಾದ ಕಾರ್ಮಿಕ ವಿರೋಧಿ ಕಾರ್ಮಿಕ ಕಾಯ್ದೆ ತಿರಸ್ಕರಿಸಿ ರೈತ, ಕಾರ್ಮಿಕ, ದಲಿತ ಸಂಘಟನೆಗಳು ಶುಕ್ರವಾರ ಬೆಳ್ತಂಗಡಿಯ ಮೂರು ಮಾರ್ಗದ ಬಳಿ ಸಾಂಕೇತಿಕವಾಗಿ ರಸ್ತೆ ತಡೆ ನಡೆಸಿದರು.

ಸಭೆಯನ್ನು ಉದ್ದೇಶಿಸಿ ಮಾಜಿ ಶಾಸಕ ಕೆ.ವಸಂತ ಬಂಗೇರ, ಕಾರ್ಮಿಕ ಮುಖಂಡ ಬಿ.ಎಂ.ಭಟ್, ಕರ್ನಾಟಕ ರಾಜ್ಯ ರೈತ ಸಂಘಟನೆಯ ಜಿಲ್ಲಾದ್ಯಕ್ಷ ಸುರೇಶ್ ಭಟ್‌ಕಾಯ್ದೆಯಿಂದ ರೈತರ ಮೇಲೆ ಆಗುವ ಪರಿಣಾಮಗಳ ಬಗ್ಗೆ ಮಾತನಾಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಮಂಜುನಾಥ್, ಶ್ಯಾಮರಾಜ್, ಲೊಕೇಶ್, ಜಯರಾಮ ಮಯ್ಯ, ನೆಬಿಸ, ಇನ್ನಿತರ ಮುಖಂಡರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News