ಕೋವಿಡ್ ನಿಯಮ ಉಲ್ಲಂಘಿಸಿದರೆ ಉದ್ದಿಮೆ ಪರವಾನಿಗೆ ರದ್ದು: ಉಳ್ಳಾಲ ನಗರಸಭೆ ಎಚ್ಚರಿಕೆ

Update: 2020-09-25 08:49 GMT

ಉಳ್ಳಾಲ, ಸೆ.25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಹೊರಡಿಸಿರುವ ನಡವಳಿಯಂತೆ ಉಳ್ಳಾಲ ನಗರಸಭಾ ವ್ಯಾಪ್ತಿಯಲ್ಲಿ ನಗರದ ವಾಣಿಜ್ಯ ಸಂಕೀರ್ಣ, ಮಾಲ್‌ಗಳು, ಹೋಟೆಲ್‌ಗಳು, ಸಾರ್ವಜನಿಕ ಸ್ಥಳಗಳಲ್ಲಿ ಅಂಗಡಿ ಮಾಲಕರು ಅಂಗಡಿಯ ಮುಂಭಾಗದಲ್ಲಿ ಸ್ವಯಂಚಾಲಿತ ಸ್ಯಾನಿಟೈಝರ್ ವ್ಯವಸ್ಥೆ ಕಲ್ಪಿಸಬೇಕು. ಗ್ರಾಹಕರನ್ನು ಸ್ಯಾನಿಟೈಝರ್ ಬಳಸಲು ಉತ್ತೇಜಿಸಬೇಕು. ಪ್ರತಿ ಅಂಗಡಿ ಮಾಲಕರು ಪ್ರತಿದಿನ ತಮ್ಮ ತಮ್ಮ ಅಂಗಡಿಗಳಲ್ಲಿ ಕೆಲಸ ನಿರ್ವಹಿಸುವ ಎಲ್ಲಾ ಸಿಬ್ಬಂದಿಯ ಆರೋಗ್ಯ ತಪಾಸಣೆ ನಡೆಸಬೇಕು. ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಾಗಿದೆ. ಈ ನಿಯಮ ಉಲ್ಲಂಘನೆ ಮಾಡಿದ್ದಲ್ಲಿ ದಂಡ ವಿಧಿಸಿ ನೋಟಿಸ್ ನೀಡಲಾಗುವುದು ಹಾಗೂ ಮೂರಕ್ಕಿಂತ ಹೆಚ್ಚು ಬಾರಿ ನಿಯಮಗಳನ್ನು ಉಲ್ಲಂಘಿಸಿದ್ದಲ್ಲಿ ದಂಡ ವಿಧಿಸಿ ಉದ್ದಿಮೆ ಪರವಾನಿಗೆಯನ್ನು ರದ್ದುಪಡಿಸಲಾಗುವುದು ಎಂದು ನಗರಸಭೆ ಪ್ರಕಟನೆ ತಿಳಿಸಿದೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News