ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ದಿ. ಇಬ್ರಾಹಿಂ ತಣ್ಣೀರುಬಾವಿ ಸ್ಮಾರಕ ಪ್ರಶಸ್ತಿ

Update: 2020-09-25 11:05 GMT

ಮಂಗಳೂರು, ಸೆ. 25: ಬ್ಯಾರಿ ಕಲೆ, ಸಾಹಿತ್ಯ, ಸಾಂಸ್ಕೃತಿಕ ಲೋಕದ ದಿಗ್ಗಜರಲ್ಲಿ ಒಬ್ಬರಾಗಿದ್ದ ದಿ. ಇಬ್ರಾಹಿಂ ತಣ್ಣಿರುಬಾವಿ ಅವರ ಸ್ಮರಣಾರ್ಥ ಪ್ರಶಸ್ತಿಯನ್ನು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬರಿಗೆ ನೀಡಲು ತೀರ್ಮಾನಿಸಲಾಗಿದೆ ಎಂದು ಅಕಾಡಮಿಯ ಅಧ್ಯಕ್ಷ ರಹೀಂ ಉಚ್ಚಿಲ್ ತಿಳಿಸಿದ್ದಾರೆ.

ಪ್ರಶಸ್ತಿಯು 25,000 ರೂ.ನಗದು, ಸ್ಮರಣಿಕೆ ಮತ್ತು ಸನ್ಮಾನ ಪತ್ರವನ್ನು ಹೊಂದಿದೆ. ಪ್ರಶಸ್ತಿ ವಿತರಣೆಯು ಅ.7ರಂದು ಬೆಂಗಳೂರಿನ ಕಲಾ ಗ್ರಾಮದಲ್ಲಿ ನಡೆಯಲಿದ್ದು, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸಿ.ಟಿ.ರವಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ, ಶಾಸಕ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಬಿ.ಎಂ.ಫಾರೂಕ್, ಕನ್ನಡ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಬಿ.ವಿ.ವಸಂತ ಕುಮಾರ್, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ. ಅಜಕ್ಕಳ ಗಿರೀಶ್ ಭಟ್, ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಡಾ.ಜಗದೀಶ್ ಪೈ, ಕರ್ನಾಟಕ ಅರೆಭಾಷೆ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಲಕ್ಷ್ಮಿ ನಾರಾಯಣ ಕಜೆಗದ್ದೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಡಾ. ಪಾರ್ವತಿ ಅಪ್ಪಯ್ಯ, ಕನ್ನಡ ಮತ್ತು ಇಲಾಖೆಯ ಕಾರ್ಯದರ್ಶಿ ನಿರ್ದೇಶಕ ಸಿ. ರಂಗಪ್ಪಅವರ ಸಮ್ಮುಖದಲ್ಲಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News