ಕೃಷಿ ಮಸೂದೆ ವಿರೋಧಿಸಿ ಸೆ.28ರಂದು ದ.ಕ. ಜಿಲ್ಲೆ ಬಂದ್: ರೈತ ಸಂಘ

Update: 2020-09-25 11:10 GMT
ಸಾಂದರ್ಭಿಕ ಚಿತ್ರ

ಪುತ್ತೂರು, ಸೆ.25: ಕೇಂದ್ರ ಮತ್ತು ರಾಜ್ಯ ಸರಕಾರವು ತಿದ್ದುಪಡಿಗೆ ಉದ್ದೇಶಿಸಿರುವ ರೈತರಿಗೆ ಮರಣ ಶಾಸನವಾಗುವ ಕೆಲವೊಂದು ರೈತ ವಿರೋಧಿ ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಸೆ.28ರಂದು ದ.ಕ. ಜಿಲ್ಲೆ ಬಂದ್ ನಡೆಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ರೈತ ಸಂಘ ಹಸಿರು ಸೇನೆಯ ದ.ಕ. ಜಿಲ್ಲಾಧ್ಯಕ್ಷ ಶ್ರೀಧರ್ ಶೆಟ್ಟಿ ಬೈಲುಗುತ್ತು ತಿಳಿಸಿದ್ದಾರೆ.

 ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರಕಾರವು ೂ ಸುಧಾರಣಾ ಕಾಯ್ದೆ ಮತ್ತು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿದ್ದು ಈ ಕಾಯ್ದೆ ದೇಶದ ಶೇ.70ರಷ್ಟಿರುವ ರೈತರಿಗೆ ಮರಣ ಶಾಸನವಾಗಲಿದೆ. ಈ ಮೂಲಕ ಕಾರ್ಪೊರೇಟ್ ಕಂಪೆನಿಗಳು ರೈತರ ೂಮಿ ಖರೀದಿಸಿ ರಿಯಲ್ ಎಸ್ಟೇಟ್ ಮಾಡಲು ಅವಕಾಶ ನೀಡಿದಂತಾಗಿದೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರ ಬೆಳೆಗಳ ಖರೀದಿಯಲ್ಲಿ ಏಕಸ್ವಾಮ್ಯ ಮಾಡಿಕೊಂಡು ಕಾರ್ಪೊರೇಟ್ ಕಂಪೆನಿಗಳಿಗೆ ಖರೀದಿಗೆ ಅವಕಾಶ ನೀಡಿದಂತಾಗುತ್ತದೆ. ರೈತರೊಂದಿಗೆ ಚರ್ಚಿಸಿ ಈ ಕಾಯ್ದೆಯ ಸಾಧಕ ಬಾಧಕಗಳನ್ನು ತಿಳಿದುಕೊಳ್ಳದೆ ಪ್ರಬಾಪ್ರಭುುತ್ವ ವಿರೋಧಿಯಾಗಿ ಕಾಯ್ದೆ ಜಾರಿಗೊಳಿಸಲು ಸರಕಾರ ಮುಂದಾಗಿದ್ದು, ಅನ್ನ ನೀಡುವ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸೆ. 28ರಂದು ಬೆಳಗ್ಗೆ ಪುತ್ತೂರು ಬಸ್ಸು ನಿಲ್ದಾಣದ ಬಳಿಯಲ್ಲಿನ ಗಾಂಧಿ ಕಟ್ಟೆಯ ಮುಂಭಾಗದಲ್ಲಿ ಪ್ರತಿಟನೆ ಹಮ್ಮಿಕೊಳ್ಳಲಾಗಿದೆ ಅಲ್ಲದೆ ರಸ್ತೆ ತಡೆ ನಡೆಸಲಾಗುವುದು ಪ್ರತಿಭಟನೆಗೆ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ದ.ಕ.ಜಿಲ್ಲಾ ರೈತ ಸಂಘ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನ್ನಪ್ಪ ಗೌಡ, ಕಡಬ ತಾಲೂಕು ಅಧ್ಯಕ್ಷ ವಿಕ್ಟರ್ ಮಾರ್ಟಿಸ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News