×
Ad

ಹಣ ಅಕ್ರಮ ವರ್ಗಾವಣೆ ಆರೋಪ: ಪ್ರಥಮ ದರ್ಜೆ ಸಹಾಯಕ ಅಮಾನತು

Update: 2020-09-25 17:46 IST

ಯಾದಗಿರಿ, ಸೆ.25: ನೈಸರ್ಗಿಕ ವಿಕೋಪದಡಿ ಸುರಪುರ ತಹಶೀಲ್ದಾರ್ ಹೆಸರಿನ ಖಾತೆಯಲ್ಲಿ ಮೀಸಲಿರಿಸಿದ್ದ 75.59 ಲಕ್ಷ ಹಣವನ್ನು ವರ್ಗಾವಣೆ ಮಾಡಿಕೊಂಡು ವಂಚಿಸಿದ ಆರೋಪ ಸಂಬಂಧ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ಸಿ.ಎಸ್.ರಾಜು ಅವರನ್ನು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ತಹಶೀಲ್ದಾರ್ ಮತ್ತು ಶಿರಸ್ತೇದಾರರಿಗೂ ಶೋಕಾಸ್ ನೋಟಿಸ್ ನೀಡಿರುವ ಜಿಲ್ಲಾಧಿಕಾರಿಗಳು, ಇಂಥ ಕೃತ್ಯದಲ್ಲಿ ಯಾರೇ ತೊಡಗಿಸಿಕೊಂಡರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಡಿಸಿ ಅವರು ತಿಳಿಸಿದ್ದಾರೆ.

ಆಕ್ಸಿಸ್ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧವೂ ಶಿಸ್ತು ಕ್ರಮಕ್ಕೆ ಪತ್ರ ಬರೆಯಲಾಗಿದೆ. ಜೊತೆಗೆ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಬ್ಯಾಂಕ್ ಸಿಬ್ಬಂದಿ ಕೈವಾಡದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಯಾರೇ ತಪ್ಪು ಮಾಡಿದರೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ನೈಸರ್ಗಿಕ ವಿಕೋಪದಡಿ ಸುರಪುರ ನಗರದಲ್ಲಿರುವ ಆಕ್ಸಿಸ್ ಬ್ಯಾಂಕ್ ಶಾಖೆಯಲ್ಲಿ ಸುರಪುರ ತಹಶೀಲ್ದಾರ್ ಹೆಸರಿನ ಖಾತೆಗೆ ಅನುದಾನ ಜಮಾ ಆಗಿತ್ತು. ಇದರಲ್ಲಿ 75.59 ಲಕ್ಷ ಹಣ ವರ್ಗಾವಣೆ ಮಾಡಿಕೊಂಡು ವಂಚಿಸಲಾಗಿದೆ ಎಂದು ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News