ಶಿವಮೊಗ್ಗ: ಕೃಷಿ ಮಸೂದೆಗಳನ್ನು ವಿರೋಧಿಸಿ ರಸ್ತೆ ತಡೆ ಚಳವಳಿ

Update: 2020-09-25 12:21 GMT

ಶಿವಮೊಗ್ಗ, ಸೆ.25: ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಶುಕ್ರವಾರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ತಡೆ ಚಳವಳಿ ನಡೆಸಿದರು.

ಕೇಂದ್ರ ಸರ್ಕಾರ ಮತ್ತು ಬಿಜೆಪಿ ಆಡಳಿತದ ರಾಜ್ಯ ಸರ್ಕಾರಗಳು ತರುತ್ತಿರುವ ರೈತ ವಿರೋಧಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ಭುಗಿಲೆದ್ದಿದೆ. ಬಿಜೆಪಿ ಸರ್ಕಾರದ ಮಂತ್ರಿಯೇ ಮಸೂದೆಗಳನ್ನು ವಿರೋಧಿಸಿ ರಾಜೀನಾಮೆ ನೀಡಿದ್ದಾರೆ. ಪಂಜಾಬ್ ಮತ್ತು ಹರ್ಯಾಣಗಳಲ್ಲಿ ಹೋರಾಟ ತೀವ್ರಗೊಂಡಿದೆ. ಯಾವುದೇ ಕಾರಣಕ್ಕೂ ಈ ಕಾಯ್ದೆಗಳು ಜಾರಿಯಾಗಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರಧಾನಮಂತ್ರಿ ರೈತಪರ ಎನ್ನುವುದೇ ಆದರೆ ರೈತರು, ಕಾರ್ಮಿ ಕರು, ದಲಿತರ ಜೊತೆ ಮಾತುಕತೆ ನಡೆಸಲಿ. ನಾವು ಸಮರ್ಥ ವಾದ ಮಂಡಿಸುತ್ತೇವೆ. ಅದನ್ನು ಬಿಟ್ಟು ಏಕಾಏಕಿ ಕಾಯ್ದೆಗಳನ್ನು ಹೊರ ತರುತ್ತಿರುವುದು ಸರಿಯಲ್ಲ. ಭೂಸುಧಾರಣೆ, ಎಪಿಎಂಸಿ, ಕಾರ್ಮಿಕ, ಅಗತ್ಯ ವಸ್ತು, ವಿದ್ಯುಚ್ಚಕ್ತಿ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಬಾರದು ಎಂದು ಪ್ರತಿಭಟನಾಕಾರರು ತಿಳಿಸಿದರು.

ರಸ್ತೆ ತಡೆ ಚಳ ವಳಿಯಲ್ಲಿ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್. ಬಸವರಾ ಜಪ್ಪ, ಈಶಣ್ಣ, ಶಿವಮೂರ್ತಿ, ಇ.ಬಿ.ಜಗದೀಶ್, ಹಾಲೇಶಪ್ಪ, ಇಟ್ಟೂರು ರಾಜು, ರಾಘವೇಂದ್ರ, ಬಿ.ಡಿ.ಮಂಜಪ್ಪ, ಬಿ.ಹೆಚ್. ರಾಮಚಂದ್ರಪ್ಪ ಸೇರಿದಂತೆ ಹಲವರಿದ್ದರು.

ಎಸ್‌ಡಿಪಿಐ ಪ್ರತಿಭಟನೆ
ರೈತರನ್ನು ಜೀತಕ್ಕೆ ತಳ್ಳುವ ಬಿಜೆಪಿ ನೀತಿ ಅತ್ಯಂತ ಅಪಾಯಕಾರಿ ಎಂದು ಆರೋಪಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಇಂದು ಕೆಇಬಿ ಸರ್ಕಲ್‌ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿ ಮಾನವ ಸರಪಳಿ ನಿರ್ಮಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿತು.

ರೈತ ವಿರೋಧಿ ಕಾಯ್ದೆಗಳು ಜಾರಿಯಾಗಬಾರದು. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಕೃಷಿ ಕ್ಷೇತ್ರವನ್ನು ಕಾರ್ಪೊರೇಟಿಕರಣ ಮಾಡಲು ಹೊರಟಿವೆ. ಇದರಿಂದ ರೈತರು ಜೀತದಾಳುಗಳಾಗುತ್ತಾರೆ. ರೈತರ ಬದುಕಿನ ಜೊತೆ ಚೆಲ್ಲಾಟವಾಡುವ ಕಾಯ್ದೆಗಳು ಜಾರಿಯಾಗಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ ಮತ್ತು ರಾಜ್ಯ ಸರ್ಕಾರ ವಿಧಾನಸಭಾ ಅಧಿವೇಶನ ಮೊಟಕು ಗೊಳಿಸಿರುವುದು ಜಾರಿಕೊಳ್ಳುವ ನೀತಿ ಅವಲಂಬಿಸಿದೆ ಎಂದು ದೂರಿದರು.

ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಸಲೀಂ ಖಾನ್, ಅಲ್ಲಾಭಕ್ಷ್, ಖಲೀಂ, ಅಬ್ದುಲ್ ಮುಜೀಬ್, ಇಮ್ರಾನ್, ಅಮ್ಜದ್, ಫೈರೋಜ್ ಖಾನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News