ಸೆ.27ರಂದು ಕೆ-ಸೆಟ್ ಪರೀಕ್ಷೆ

Update: 2020-09-25 14:55 GMT

ಬೆಂಗಳೂರು, ಸೆ.25: ಮೈಸೂರು ವಿಶ್ವವಿದ್ಯಾಲಯವು ರಾಜ್ಯ ಸರಕಾರದ ಅನುಮತಿಯೊಂದಿಗೆ ಸೆ.27ರಂದು ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕದ 10 ವಿಶ್ವವಿದ್ಯಾಲಯಗಳ ಸಹಕಾರದೊಂದಿಗೆ ನಡೆಸಲಿದೆ.

ಬೆಂಗಳೂರು ವಿಶ್ವವಿದ್ಯಾಲಯ ನೋಡಲ್ ಕೇಂದ್ರದಲ್ಲಿ ಈ ಬಾರಿ 18,741 ವಿದ್ಯಾರ್ಥಿಗಳು ಕೆ-ಸೆಟ್ ಪರೀಕ್ಷೆಯನ್ನು 41 ವಿಷಯಗಳಲ್ಲಿ ತೆಗೆದುಕೊಂಡಿದ್ದಾರೆ. ಒಟ್ಟು ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ 28 ಕಾಲೇಜುಗಳನ್ನು ಪರೀಕ್ಷಾ ಉಪಕೇಂದ್ರಗಳಾಗಿ ತೆಗೆದುಕೊಳ್ಳಲಾಗಿದೆ. ಬೆಂಗಳೂರು ನೋಡಲ್ ಕೇಂದ್ರದಲ್ಲಿ ಬೆಂಗಳೂರು ವಿವಿ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಮಾರ್ಗದರ್ಶನದಲ್ಲಿ ಕೆ-ಸೆಟ್ ಪರೀಕ್ಷೆಯ ಸಿದ್ಧತೆಯನ್ನು ನೋಡಲ್ ಅಧಿಕಾರಿ ಡಾ.ಸಿ.ನಾಗಭೂಷಣ ನಡೆಸಿದ್ದಾರೆ.

ಪರೀಕ್ಷೆಯು ಸುಗಮವಾಗಿ ನಡೆಯಲು ಬೆಂಗಳೂರು ವಿವಿ ಕುಲ ಸಚಿವರು ವಿಶ್ವವಿದ್ಯಾಲಯದ 28 ಪ್ರಾಧ್ಯಾಪಕರನ್ನು ಸಂಬಂಧಿಸಿದ ಕಾಲೇಜುಗಳ ಪರಿವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಕೋವಿಡ್ 19 ಮುಂಜಾಗ್ರತೆಯ ಕ್ರಮವಾಗಿ ಈಗಾಗಲೇ 28 ಕಾಲೇಜುಗಳ ಪ್ರಾಚಾರ್ಯರುಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ್ದು, ಸಭೆಯಲ್ಲಿ ಕೋವಿಡ್-19ರ ಸಲುವಾಗಿ ಅನುಸರಿಸಬೇಕಾದ ಮುಂಜಾಗ್ರತಾ ಮಾರ್ಗದರ್ಶನ ಸೂಚನೆಗಳನ್ನು ಚರ್ಚಿಸಲಾಗಿದೆ.

ಪರೀಕ್ಷೆ ನಡೆಯುವ ದಿನ ಸುರಕ್ಷಿತ ಅಂತರ, ಮಾಸ್ಕ್ ಧರಿಸುವಿಕೆ, ಸ್ಯಾನಿಟೈಸೇಶನ್ ಮುಂತಾದ ಸುರಕ್ಷಾ ಕ್ರಮಗಳನ್ನು ಅಳವಡಿಸಿಕೊಂಡು ಕೆ-ಸೆಟ್ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಸೂಚಿಸಲಾಗಿದೆ. ಕೆ-ಸೆಟ್ ಪರೀಕ್ಷೆಗೆ ಸಂಬಂಧಪಟ್ಟ ಹಾಗೆ ವಿದ್ಯಾರ್ಥಿಗಳಿಗೆ ಅವಶ್ಯಕತೆ ಇದ್ದಲ್ಲಿ 7022229110, 9036885734, 9986770148, 9448104615, 9845637247 ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News