ಖ್ಯಾತ ಗಾಯಕ ಎಸ್‍ಪಿಬಿಗೆ 'ಆಳ್ವಾಸ್ ವಿರಾಸತ್' ಪ್ರಶಸ್ತಿಯೂ ಲಭಿಸಿತ್ತು

Update: 2020-09-25 15:36 GMT

ಮೂಡುಬಿದಿರೆ : ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಶುಕ್ರವಾರದಂದು ಕೊನೆಯುಸಿರೆಳೆದ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರಿಗೆ ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು 2015ರಲ್ಲಿ ನಡೆದ ರಾಷ್ಟ್ರಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ "ಆಳ್ವಾಸ್ ವಿರಾಸತ್" ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮಶ್ರೀ ಡಾ. ಡಿ.ವೀರೇಂದ್ರ ಹೆಗ್ಗಡೆ ಅವರು ಪ್ರಶಸ್ತಿ ಪ್ರದಾನ ಮಾಡಿದ್ದರು.

ಇದಲ್ಲದೆ 2009ರಲ್ಲಿ ಮಿಜಾರಿನ ಶೋಭಾವನದಲ್ಲಿ ರಾತ್ರಿ ನಡೆದ ಆಳ್ವಾಸ್ ವಿರಾಸತ್ ಕಾರ್ಯಕ್ರಮದಲ್ಲಿ ಎಸ್‍ಪಿಬಿ ಅವರು ಸಂಗೀತ ರಸ ಸಂಜೆಯನ್ನು ನಡೆಸಿಕೊಟ್ಟಿದ್ದರು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಸ್ಮರಿಸಿಸುತ್ತಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News