ಗ್ರಾಮ ಸ್ವರಾಜ್-ಪಂಚಾಯತ್ ಸೇರಿದಂತೆ ಎಂಟು ವಿಧೇಯಕಗಳ ಅಂಗೀಕಾರ

Update: 2020-09-25 15:55 GMT

ಬೆಂಗಳೂರು, ಸೆ.25: 2020ನೆ ಸಾಲಿನ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್(ತಿದ್ದುಪಡಿ) ವಿಧೇಯಕ ಸೇರಿದಂತೆ ಎಂಟು ವಿಧೇಯಕಗಳಿಗೆ ಶುಕ್ರವಾರ ವಿಧಾನಸಭೆಯಲ್ಲಿ ಅಂಗೀಕಾರ ಲಭಿಸಿತು.

2020ನೆ ಸಾಲಿನ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2020ನೆ ಸಾಲಿನ ಕರ್ನಾಟಕ ಭೂ ಕಂದಾಯ(ಎರಡನೆ ತಿದ್ದುಪಡಿ) ವಿಧೇಯಕ, 2020ನೆ ಸಾಲಿನ ಕರ್ನಾಟಕ ಸ್ಟಾಂಪು(ತಿದ್ದುಪಡಿ) ವಿಧೇಯಕ, 2020ನೆ ಸಾಲಿನ ಕರ್ನಾಟಕ ನ್ಯಾಯಾಲಯ ಶುಲ್ಕಗಳು ಮತ್ತು ದಾವೆಗಳ ಮೌಲ್ಯನಿರ್ಣಯ(ತಿದ್ದುಪಡಿ) ವಿಧೇಯಕ, 2020ನೆ ಸಾಲಿನ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2020ನೆ ಸಾಲಿನ ಕರ್ನಾಟಕ ಭೂ ಕಂದಾಯ(ಎರಡನೆ ತಿದ್ದುಪಡಿ) ವಿಧೇಯಕ ಹಾಗೂ 2020ನೆ ಸಾಲಿನ ಕೈಗಾರಿಕಾ ವಿವಾದಗಳು ಮತ್ತು ಕೆಲವು ಇತರ ಕಾನೂನುಗಳ(ಕರ್ನಾಟಕ ತಿದ್ದುಪಡಿ) ವಿಧೇಯಕಕ್ಕೆ ಅಂಗೀಕಾರ ಸಿಕ್ಕಿತು.

ಪುನರ್ ಪರ್ಯಾಲೋಚನೆ-ಅಂಗೀಕಾರ: ರಾಜ್ಯ ವಿಧಾನಸಭೆಯಿಂದ ಅಂಗೀಕೃತವಾದ ರೂಪದಲ್ಲಿ ಮತ್ತು ಕರ್ನಾಟಕ ವಿಧಾನಪರಿಷತ್ತಿನ ತಿದ್ದುಪಡಿಯೊಂದಿಗೆ ಅಂಗೀಕಾರವಾದ ರೂಪದಲ್ಲಿರುವ 2020ನೆ ಸಾಲಿನ ಕರ್ನಾಟಕ ಕೆಲವು ಅಧಿನಿಯಮಗಳು ಮತ್ತು ಪ್ರಾದೇಶಿಕ ಕಾನೂನುಗಳನ್ನು ನಿರಸನಗೊಳಿಸುವ ವಿಧೇಯಕ ಹಾಗೂ 2020ನೆ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ಧಿ)(ತಿದ್ದುಪಡಿ) ವಿಧೇಯಕವನ್ನು ಪುನರ್ ಪರ್ಯಾಲೋಚಿಸಿ, ಅಂಗೀಕರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News