ಬೆಂಗಳೂರು ವಿವಿ: ಮುಂದೂಡಲಾಗಿದ್ದ ಪದವಿ, ಸ್ನಾತಕೋತ್ತರ ಪದವಿ ಪರೀಕ್ಷೆಗಳ ದಿನಾಂಕ ಪ್ರಕಟ

Update: 2020-09-25 16:20 GMT

ಬೆಂಗಳೂರು, ಸೆ.25: ಕೇಂದ್ರ ಮತ್ತು ರಾಜ್ಯ ಸರಕಾರಗಳ ರೈತ, ಕಾರ್ಮಿಕ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ರೈತ, ಕಾರ್ಮಿಕ, ದಲಿತ ಸಂಘಟನೆಗಳು ಜಂಟಿಯಾಗಿ ಕರ್ನಾಟಕ ಬಂದ್ ಹಾಗೂ ರಸ್ತೆ ತಡೆಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗಿದೆ.

ಸೆ.25 ಹಾಗೂ ಸೆ.28 ರಂದು ನಡೆಯಬೇಕಾಗಿದ್ದ ಅಂತಿಮ ವರ್ಷದ ಪದವಿ ಪರೀಕ್ಷೆಗಳಿಗೆ ಮರು ದಿನಾಂಕ ನೀಡಲಾಗಿದ್ದು, ಸೆ.25 ರಂದು ನಡೆಯಬೇಕಿದ್ದ ಪರೀಕ್ಷೆ ಅ.6 ಹಾಗೂ ಸೆ.28 ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಅ.4 ರಂದು ನಡೆಸಲಾಗುತ್ತಿದೆ. ಅಲ್ಲದೆ, ಸೆ.29 ರಂದು ನಡೆಯಬೇಕಿದ್ದ ಸ್ನಾತಕೋತ್ತರ ಪದವಿ ಪರೀಕ್ಷೆಯು ಅ.5 ರಂದು ನಡೆಯಲಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಪ್ರಕಟನೆಯಲ್ಲಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News