ನಟಿ ಕಂಗನಾ ರಾಣಾವತ್ ವಿರುದ್ಧ ತುಮಕೂರು ನ್ಯಾಯಾಲಯಕ್ಕೆ ದೂರು
Update: 2020-09-25 21:48 IST
ತುಮಕೂರು, ಸೆ.25: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿಗೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಭಯೋತ್ಪಾದಕರು ಎಂದು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದರೆನ್ನಲಾದ ಬಾಲಿವುಡ್ ನಟಿ ಕಂಗನಾ ರಾಣಾವತ್ ವಿರುದ್ಧ ತುಮಕೂರಿನ ವಕೀಲರೊಬ್ಬರು ಖಾಸಗಿ ದೂರು ಸಲ್ಲಿಸಿದ್ದಾರೆ.
ರೈತ ಹಾಗೂ ವಕೀಲರಾದ ರಮೇಶ್ ನಾಯಕ್ ಸ್ಥಳೀಯ ಜೆಎಂಎಫ್ ಸಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ.
ಈ ಮೊದಲು ಇಮೇಲ್ ಮೂಲಕ ಡಿಐಜಿ ಯವರಿಗೆ ದೂರು ನೀಡಿದ್ದರು. ಆದರೆ ಅವರು ದೂರು ದಾಖಲಿಸಿಕೊಳ್ಳದ ಕಾರಣ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲು ಮಾಡಿದ್ದಾರೆ.