​ದ.ಕ. ಅಪರ ಜಿಲ್ಲಾಧಿಕಾರಿಗೆ ಕೊರೋನ ಪಾಸಿಟಿವ್

Update: 2020-09-25 16:22 GMT

ಮಂಗಳೂರು, ಸೆ. 25: ದಕ್ಷಿಣ ಕನ್ನಡ ಜಿಲ್ಲಾ ಅಪರ ಜಿಲ್ಲಾಧಿಕಾರಿಗೆ ಕೊರೋನ ಪಾಸಿಟಿವ್ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗೆ ವರ್ಕ್ ಫ್ರೊಮ್ ಹೋಂ ವಿಧಿಸಲಾಗಿದೆ. ಅಲ್ಲದೆ, ಜಿಲ್ಲಾಧಿಕಾರಿಯು ಸ್ವತಃ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಸ್ಯಾನಿಟೈಸೇಷನ್ ಮಾಡುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ವರ್ಕ್ ಫ್ರೊಮ್ ಹೋಂಗೆ ಒಳಗಾಗಿದ್ದಾರೆ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News