ರೌಡಿ ಶೀಟರ್ ಕೊಲೆ ಪ್ರಕರಣ : ಮನೋಜ್ ಕೋಡಿಕೆರೆ ತಂಡದ ವಿರುದ್ಧ ದೂರು

Update: 2020-09-25 16:36 GMT
ಕಿಶನ್ ಹೆಗ್ಡೆ

ಹಿರಿಯಡ್ಕ, ಸೆ.25: ಹಿರಿಯಡ್ಕ ಪೇಟೆಯಲ್ಲಿ ಹಾಡಹಗಲೇ ನಡೆದ ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತಂಡ ತನಿಖೆ ಚುರುಕುಗೊಳಿಸಿದ್ದು, ದುಷ್ಕರ್ಮಿಗಳು ಕೃತ್ಯಕ್ಕೆ ಬಳಸಿದ ಮತ್ತೊಂದು ಕಾರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಕಿಶನ್ ಹೆಗ್ಡೆ ಹಾಗೂ ಮನೋಜ್ ಕೋಡಿಕೆರೆ ನಡುವೆ ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಉಂಟಾಗಿದ್ದು, ಇದೇ ದ್ವೇಷದಲ್ಲಿ ಮನೋಜ್ ಕೋಡಿಕೆರೆ ಇತರರೊಂದಿಗೆ ಸೇರಿ ಈ ಕೃತ್ಯ ಎಸಗಿರುವುದಾಗಿ ದಿವ್ಯರಾಜ್ ಶೆಟ್ಟಿ ಹಿರಿಯಡ್ಕ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣದ ತನಿಖೆಗಾಗಿ ಹೆಚ್ಚುವರಿ ಎಸ್ಪಿ ಕುಮಾರಚಂದ್ರ ನೇತೃತ್ವದಲ್ಲಿ ನಾಲ್ಕು ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಈಗಾಗಲೇ ತಂಡ ತನಿಖೆ ಚುರುಕು ಗೊಳಿಸಿದೆ. ಬೆಂಗಳೂರು ಹಾಗೂ ಮಂಗಳೂರು ಹಾಗೂ ಇತರ ಭಾಗಗಳಿಗೆ ತೆರಳಿರುವ ತಂಡ, ಆರೋಪಿಗ ಶೋಧ ಕಾರ್ಯ ಮುಂದುವರೆಸಿದೆ.

ಕೊಲೆ ಎಸಗಿದ ಬಳಿಕ ಎರಡು ಕಾರಿನಲ್ಲಿ ಪರಾರಿಯಾಗಿದ್ದ ಆರೋಪಿಗಳು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಕಣಜಾರು ಎಂಬಲ್ಲಿ ಬಿಟ್ಟು ಪರಾರಿಯಾಗಿದ್ದ ರಿಟ್ಝ್ ಕಾರನ್ನು ಪೊಲೀಸರು ನಿನ್ನೆ ರಾತ್ರಿ ವೇಳೆ ವಶಪಡಿಸಿಕೊಂಡಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇರ್ವತ್ತೂರು ಎಂಬಲ್ಲಿ ಬಿಟ್ಟು ಹೋಗಿರುವ ಇನ್ನೋವಾ ಕಾರನ್ನು ಇಂದು ವಶಕ್ಕೆ ತೆಗೆದು ಕೊಳ್ಳಲಾಗಿದೆ ಎಂದು ಹೆಚ್ಚುವರಿ ಎಸ್ಪಿ ಕುಮಾರಚಂದ್ರ ತಿಳಿಸಿದ್ದಾರೆ.

ಸೆ.24ರಂದು ಮಧ್ಯಾಹ್ನ ದಿವ್ಯರಾಜ್ ಶೆಟ್ಟಿ, ಕಿಶನ್ ಹೆಗ್ಡೆ ಹಾಗೂ ಹರಿ ಪ್ರಸಾದ್ ಶೆಟ್ಟಿ ಹಿರಿಯಡ್ಕ ವೀರಭದ್ರ ದೇವಸ್ಥಾನಕ್ಕೆ ಹೋಗಲು ಕಾರಿನಿಂದ ಇಳಿ ಯುತ್ತಿರುವಾಗ ಎರಡು ಕಾರಿನಲ್ಲಿ ಬಂದ 7-8 ಮಂದಿ ದುಷ್ಕರ್ಮಿಗಳು ತಲ ವಾರಿನಿಂದ ಕಡಿದು ಕಿಶನ್ ಹೆಗ್ಡೆಯನ್ನು ಕೊಲೆ ಮಾಡಿದ್ದಾರೆ. ಈ ಸಂದರ್ಭ ದಲ್ಲಿ ಹರಿಪ್ರಸಾದ್ ಶೆಟ್ಟಿ ಎಂಬವರು ಗಾಯಗೊಂಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News