ಸುರೇಶ್ ಅಂಗಡಿ ಸ್ಮಾರಕ ನಿರ್ಮಾಣ: ಸಚಿವ ಜಗದೀಶ್ ಶೆಟ್ಟರ್

Update: 2020-09-25 16:47 GMT

ಬೆಳಗಾವಿ, ಸೆ.25: ಕೊರೋನ ಸೋಂಕಿನಿಂದ ನಿಧನ ಹೊಂದಿದ್ದ ಕೇಂದ್ರ ಸಚಿವ ಸುರೇಶ್ ಅಂಗಡಿ ನೆನಪಿನಲ್ಲಿ ಸ್ಮಾರಕ ನಿರ್ಮಾಣ ಮಾಡುವುದಾಗಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಶುಕ್ರವಾರ ವಿಶ್ವೇಶ್ವರಯ್ಯ ನಗರದಲ್ಲಿರುವ ಸುರೇಶ್ ಅಂಗಡಿ ಅವರ ನಿವಾಸಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಅವರ ಸ್ಮಾರಕ ನಿರ್ಮಾಣದ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿಧಿವಶರಾದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರವನ್ನು ಬೆಳಗಾವಿಗೆ ತರಲು ಕೇಂದ್ರದ ಕೊರೋನ ಮಾರ್ಗಸೂಚಿಗಳೇ ಅಡ್ಡಿಯಾದವು ಎಂದ ಅವರು, ಅಂಗಡಿಯವರಿಗೆ ಅವರ ಆರೋಗ್ಯದ ಕಾಳಜಿಗಿಂತ ಜನರ ಸೇವೆಯೇ ಹೆಚ್ಚಾಗಿತ್ತು. ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸಚಿವರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದರೂ ಸಹ ಅವರಿಗೆ ಜನಸೇವೆ ಮೇಲೆಯೇ ಹೆಚ್ಚು ಆಸಕ್ತಿ ಇತ್ತು ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News