ಮಡಿಕೇರಿ: ಕಾಂಗ್ರೆಸ್ ಮುಖಂಡ ಎಂ.ಎ.ಉಸ್ಮಾನ್ ನಿಧನ

Update: 2020-09-25 16:53 GMT

ಮಡಿಕೇರಿ, ಸೆ.25: ಮಡಿಕೇರಿ ನಗರಸಭೆಯ ಮಾಜಿ ಸದಸ್ಯ ಹಾಗೂ ಕೆಪಿಸಿಸಿ ಸದಸ್ಯ ನಗರದ ಮಹದೇವಪೇಟೆ ನಿವಾಸಿ ಎಂ.ಎ.ಉಸ್ಮಾನ್(72) ಅವರು ಅನಾರೋಗ್ಯದಿಂದ ಇಂದು ಸಂಜೆ ನಿಧನ ಹೊಂದಿದ್ದಾರೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. 

ಮೃತರ ಅಂತ್ಯಕ್ರಿಯೆ ಸೆ.26ರಂದು ಮಡಿಕೇರಿಯ ಈದ್ಗಾ ಮೈದಾನದಲ್ಲಿ ನಡೆಯಲಿದೆ ಎಂದು ಮೃತರ ಸಹೋದರ ಸಂಬಂಧಿ ಕೆ.ಯು.ಅಬ್ದುಲ್ ರಝಾಕ್ ತಿಳಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದ ಉಸ್ಮಾನ್ ಅವರು ಎಸ್.ಎಂ.ಕೃಷ್ಣ ಅವರ ನೇತೃತ್ವದ ಸರ್ಕಾರವಿದ್ದಾಗ ಮಡಿಕೇರಿ ಆಶ್ರಯ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಇದೇ ಅವಧಿಯಲ್ಲಿ ಅವರು ರಾಜೇಶ್ವರಿ ನಗರದಲ್ಲಿ ನೂರಾರು ಬಡ ಕುಟುಂಬಗಳಿಗೆ ಆಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮುಖಂಡರಾಗಿ ಮತ್ತು ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಸದಸ್ಯರಾಗಿಯೂ ಉಸ್ಮಾನ್ ಗುರುತಿಸಿಕೊಂಡಿದ್ದರು.
ಜಿಲ್ಲಾ ಕಾಂಗ್ರೆಸ್ ಸಮಿತಿ, ಜಿಲ್ಲಾ ಅಲ್ಪಸಂಖ್ಯಾತರ ಘಟಕ, ಮಡಿಕೇರಿ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಪ್ರಮುಖರು ಸೇರಿದಂತೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕೆಪಿಸಿಸಿ ಉಸ್ತುವಾರಿ ಶಾಹಿದ್ ತೆಕ್ಕಿಲ್ ಸಂತಾಪ ಸೂಚಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News