ಸೆ.27: ವಿಶ್ವ ಪ್ರವಾಸೋದ್ಯಮ ದಿನಾಚರಣೆ

Update: 2020-09-25 16:57 GMT

ಉಡುಪಿ, ಸೆ.25: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಮಲ್ಪೆ ಅಭಿವೃದ್ಧಿ ಸಮಿತಿ, ನೆಹರು ಯುವ ಕೇಂದ್ರ, ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಹಾಗೂ ಸ್ಕೌಟ್ ಮತ್ತು ಗೈಡ್ಸ್ ಇವರ ಸಹಯೋಗದೊಂದಿಗೆ ಈ ಬಾರಿಯ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಯನ್ನು, ಪ್ರವಾಸೋದ್ಯಮ ಹಾಗೂ ಗ್ರಾಮೀಣಾಭಿವೃದ್ಧಿ ಎಂಬ ಸಂದೇಶದೊಂದಿಗೆ ಸೆ.27ರ ಬೆಳಗ್ಗೆ 9 ಗಂಟೆಗೆ ಮಲ್ಪೆ ಬೀಚ್‌ನಲ್ಲಿ ಆಚರಿಸಲಾಗುವುದು.

ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಮತ್ತು ಸಹಕಾರ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕ್ರೀಡಾ ಸಚಿವ ಸಿ.ಟಿ ರವಿ, ಮೀನುಗಾರಿಕೆ ಮತ್ತು ಬಂದರು ಹಾಗೂ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯ ಶಾಸಕರು, ಸಂಸದರು ಹಾಗೂ ಇತರ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.

ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎ.ರಾಘವೇಂದ್ರ ಕಿಣಿ, ತಾಪಂ ಅಧ್ಯಕ್ಷೆ ಸಂಧ್ಯಾ ಕಾಮತ್, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್, ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಚೇತನ್ ಆರ್, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಾಗೂ ಇತರರು ಉಪಸ್ಥಿತರಿರುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News