ಮೈಸೂರು: ಬಾಲಕಿಯ ಅತ್ಯಾಚಾರ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ

Update: 2020-09-25 17:12 GMT

ಮೈಸೂರು,ಸೆ.25: ಬಾಲಕಿಯೋರ್ವಳ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯುವಕನೋರ್ವನಿಗೆ ಮೈಸೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಪೋಕ್ಸೋ ಕಾಯ್ದೆಯಡಿ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ.ದಂಡ ವಿಧಿಸಿ ತೀರ್ಪು ನೀಡಿದೆ.

ಹುಣಸೂರು ತಾಲೂಕಿನ ಚಂದ್ರ ಎಂಬಾತನೇ ಶಿಕ್ಷೆಗೊಳಗಾದ ವ್ಯಕ್ತಿ. ಈತ ಜೂನ್ 14ರಂದು, ತನ್ನ ಮನೆಯಲ್ಲಿ ಟಿವಿ ನೋಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಆಕೆಯನ್ನು ಮನೆಯ ಹಿಂಭಾಗಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರ ನಡೆಸಿದ್ದು ಸಾಕ್ಷ್ಯ ಮತ್ತು ತನಿಖೆಯಿಂದ ದೃಢವಾಗಿತ್ತು.

ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಬಿ.ಎಸ್.ಜಯಶ್ರೀ ತಪ್ಪಿತಸ್ಥನಿಗೆ ಶಿಕ್ಷೆ ನೀಡಿದ್ದಾರೆ. ಸಂತ್ರಸ್ತ ಬಾಲಕಿಗೆ 7 ಲಕ್ಷ ರೂ.ಪರಿಹಾರ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ್ದಾರೆ ಎಂದು ಸರ್ಕಾರಿ ಅಭಿಯೋಜಕಿ ಎಂ.ಎಸ್.ಮಂಜುಳಾ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News