ಗ್ರಾಮಮಟ್ಟದಲ್ಲೂ ಕೋವಿಡ್ ಪರೀಕ್ಷೆ: ದ.ಕ. ಜಿಪಂ ಸಿಇಒ

Update: 2020-09-25 17:17 GMT

ಮಂಗಳೂರು, ಸೆ.25:ದ.ಕ ಜಿಲ್ಲೆಯಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ರೋಗದ ನಿಯಂತ್ರಣಕ್ಕಾಗಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆಯನ್ನು ಗ್ರಾಮ ಮಟ್ಟಕ್ಕೆ ವಿಸ್ತರಿಸಲಾಗಿದೆ ಎಂದು ದ.ಕ.ಜಿಪಂ ಸಿಇಒ ಡಾ.ಅರ್.ಸೆಲ್ವಮಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಸೋಂಕಿತ ವ್ಯಕ್ತಿಯಿಂದ ಸಾರ್ವಜನಿಕ ವಲಯದಲ್ಲಿ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಗ್ರಾಪಂ ವ್ಯಾಪ್ತಿಗಳಲ್ಲಿ ರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿ ಹಾಗೂ ಪಿಡಿಒ ಅವರನ್ನು ಸಂಪರ್ಕಿಸಿ ಎಲ್ಲರೂ ಸ್ವಇಚ್ಛೆಯಿಂದ ಪರೀಕ್ಷೆ ಮಾಡಿಸಿ ಕೊಳ್ಳಬಹುದಾಗಿದೆ.

ಈಗಾಗಲೆ ಗ್ರಾಪಂ ಮಟ್ಟದಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವ ಕೇಂದ್ರ ಮತ್ತು ದಿನಾಂಕವನ್ನು ನಿಗದಿಪಡಿಸಲಾಗಿದೆ. ಗ್ರಾಮಸ್ಥರು ಆಯಾ ಗ್ರಾಪಂ ಅಥವಾ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ.

ದ.ಕ. ಜಿಲ್ಲೆಯ ಪ್ರತಿಯೊಬ್ಬ ರೋಗಬಾಧಿತರು, 60 ವರ್ಷ ಮೇಲ್ಪಟ್ಟವರು ಹಾಗೂ 10 ವರ್ಷದೊಳಗಿನ ಎಲ್ಲ ಮಕ್ಕಳು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು. ಪರೀಕ್ಷೆಗೊಳಗಾದ ಬಗ್ಗೆ ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿ ಕಾರಿಗಳಿಗೆ ಸಿಇಒ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News