ಹಿರಿಯ ಕಮ್ಯುನಿಸ್ಟ್ ನಾಯಕ ಕೆ.ವಿ.ಭಟ್ ನಿಧನ

Update: 2020-09-25 17:24 GMT

ಮಂಗಳೂರು, ಸೆ.25: ಸಿಪಿಐ ದ.ಕ ಮತ್ತು ಉಡುಪಿ ಜಿಲ್ಲಾ ಸಮಿತಿ ಸದಸ್ಯ, ಸಿಪಿಐ ಉಡುಪಿ ತಾಲೂಕು ಕಾರ್ಯದರ್ಶಿ ಹಾಗೂ ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ)ನ ದ.ಕ ಮತ್ತು ಉಡುಪಿ ಜಿಲ್ಲಾಧ್ಯಕ್ಷ, ಎಸ್.ಕೆ ಬೀಡಿ ವರ್ಕರ್ಸ್‌ ಫೆಡರೇಶನ್‌ನ ಅಧ್ಯಕ್ಷ ಕಾಮ್ರೇಡ್ ಕೆ. ವಾಸುದೇವ ಭಟ್ ಉಡುಪಿ (71) ಅಲ್ಪಕಾಲದ ಅಸೌಖ್ಯದಿಂದ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.

ಮೃತರು ಪತ್ನಿ, ಓರ್ವ ಮಗ ಹಾಗೂ ಮಗಳನ್ನು ಅಗಲಿದ್ದಾರೆ.

ಎಐಟಿಯುಸಿ ನೇತೃತ್ವದ ಉಡುಪಿ ತಾಲೂಕು ಬೀಡಿ ಲೇಬರ್ ಯೂನಿಯನ್‌ನ ಕೋಶಾಧಿಕಾರಿ, ಉಡುಪಿ ತಾಲೂಕು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘದ ಕಾರ್ಯದರ್ಶಿಯಾಗಿ ಕಾರ್ಯನಿರ್ವಸುತ್ತಿದ್ದರು. ಎಐಬಿಇಎ ನೇತೃತ್ವದ ಬ್ಯಾಂಕ್ ನೌಕರರ ಸಂಘಟನೆಯ ಅಖಿಲ ಭಾರತ ಮಟ್ಟದ ಮಾಜಿ ಉಪಾಧ್ಯಕ್ಷರಾಗಿದ್ದರು.

ಪ್ರಗತಿಪರ ಚಿಂತಕರಾಗಿದ್ದ ಅವರು ಉಡುಪಿ ಸರಕಾರಿ ಆಸ್ಪತ್ರೆಯನ್ನು ಖಾಸಗಿಯವರಿಗೆ ಸರಕಾರ ವಹಿಸಿಕೊಟ್ಟದ್ದನ್ನು ವಿರೋಧಿಸಿ ಸಿಪಿಐ ನೇತೃತ್ವದಲ್ಲಿ ಮೊತ್ತಮೊದಲ ಬಾರಿಗೆ ಹೋರಾಟವನ್ನು ಪ್ರಾರಂಭಿಸಿದ್ದರು. ಬ್ಯಾಂಕ್ ಉದ್ಯೋಗದಿಂದ ನಿವೃತ್ತಿಯಾದ ನಂತರ ಸಿಪಿಐ, ಎಐಟಿಯುಸಿ ಹಾಗೂ ಪ್ರಗತಿಪರ ಸಂಘಟನೆಗಳ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಸಂತಾಪ: ಸಿಪಿಐ ದ.ಕ. ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್, ಎಐಟಿಯುಸಿ ಜಿಲ್ಲಾ ಕಾರ್ಯದರ್ಶಿ ಎಚ್.ವಿ. ರಾವ್, ಸಿಪಿಐ ಜಿಲ್ಲಾ ಕೋಶಾಧಿಕಾರಿ ಎ. ಪ್ರಭಾಕರ ರಾವ್, ಉಡುಪಿ ತಾಲೂಕು ಬೀಡಿ ಲೇಬರ್ ಯೂನಿಯನ್ ಕಾರ್ಯದರ್ಶಿ ಶಶಿಕಲಾ ಗಿರೀಶ್, ಉಡುಪಿ ತಾಲೂಕು ಕಟ್ಟಡ ಕಾರ್ಮಿಕ ಸಂಘಟನೆಯ ಸುಚಿತ್ರಾ, ಕಾರ್ಮಿಕ ನಾಯಕರಾದ ಸಂಜೀವ ಶೇರಿಗಾರ್, ಶಿವಾನಂದ ಎಸ್., ರಾಜು ಪೂಜಾರಿ, ವಿಠಲ ಶೆಟ್ಟಿ, ಶಾಂತಾ ನಾಯಕ್, ಸಿಪಿಐ ಜಿಲ್ಲಾ ನಾಯಕರಾದ ಬಿ. ಶೇಖರ್, ವಿ.ಎಸ್. ಬೇರಿಂಜ, ಎಂ. ಕರುಣಾಕರ್, ಸುರೇಶ್ ಕುಮಾರ್ ಬಂಟ್ವಾಳ್, ಆರ್.ಡಿ ಸೋನ್ಸ್ ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News