ಬೆಳ್ತಂಗಡಿ: ಬಾಲಕಿಗೆ ಕಿರುಕುಳ ; ಇಬ್ಬರು ಸಂಬಂಧಿಗಳು ಸೆರೆ

Update: 2020-09-25 17:33 GMT

ಬೆಳ್ತಂಗಡಿ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಆಕೆಯ ಸಹೋದರ ಹಾಗೂ ಸೋದರ ಸಂಬಂಧಿಗಳಾಗಿರುವ ಇಬ್ಬರನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ಸಹೋದರ 17 ವರ್ಷದ ಬಾಲಕ ಹಾಗೂ ಸಂಬಂಧಿ 16 ವರ್ಷದ ಶಿತಾ೯ಡಿಯ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News