ಭಾರತೀಯ ವೈದ್ಯಕೀಯ ಮಂಡಳಿ ರದ್ದು: ರಾಷ್ಟ್ರೀಯ ವೈದ್ಯಕೀಯ ಆಯೋಗ ಅಸ್ತಿತ್ವಕ್ಕೆ

Update: 2020-09-25 17:37 GMT

ಹೊಸದಿಲ್ಲಿ, ಸೆ. 25: ವೈದ್ಯಕೀಯ ಶಿಕ್ಷಣ ಹಾಗೂ ವೃತ್ತಿಯನ್ನು ನಿಯಂತ್ರಿಸುವ ದೇಶದ ಅತ್ಯುಚ್ಛ ಸಂಸ್ಥೆ ಭಾರತೀಯ ವೈದ್ಯಕೀಯ ಮಂಡಳಿ (ಎಂಸಿಐ) ಸ್ಥಾನದಲ್ಲಿ ಶುಕ್ರವಾರ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಅಸ್ತಿತ್ವಕ್ಕೆ ಬಂದಿದೆ. ವೈದ್ಯಕೀಯ ಶಿಕ್ಷಣ ಕ್ಷೇತ್ರದ ಚಾರಿತ್ರಿಕ ಸುಧಾರಣೆಯಲ್ಲಿ ಉನ್ನತ ಶಿಕ್ಷಣ ನಿಯಂತ್ರಕರಾಗಿ ಕಾರ್ಯ ನಿರ್ವಹಿಸಲು ನಾಲ್ಕು ಸ್ವಾಯತ್ತ ಮಂಡಳಿಯೊಂದಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು ರಚಿಸಲಾಗಿದೆ. ಭಾರತೀಯ ವೈದ್ಯಕೀಯ ಮಂಡಳಿಯನ್ನು ರದ್ದುಗೊಳಿಸಲಾಗಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ)ದ ದಿನನಿತ್ಯ ಕಾರ್ಯಗಳಿಗೆ ನೆರವು ನೀಡಲು ಪದವಿಪೂರ್ವ ವೈದ್ಯಕೀಯ ಶಿಕ್ಷಣ ಮಂಡಳಿ, ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮಂಡಳಿ, ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿ ಹಾಗೂ ವೈದ್ಯಕೀಯ ನೋಂದಣಿ ಮಂಡಳಿ ಎಂಬ ನಾಲ್ಕು ಸ್ವಾಯತ್ತ ಸಂಸ್ಥೆಯನ್ನು ರಚಿಸಲಾಗಿದೆ. ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ದ ಅಧ್ಯಕ್ಷರನ್ನಾಗಿ ಏಮ್ಸ್‌ನ ಇಎನ್‌ಟಿ ವಿಭಾಗದ ಮಾಜಿ ಮುಖ್ಯಸ್ಥ ಡಾ. ಸುರೇಶ್ ಚಂದ್ರ ಶರ್ಮಾ ಅವರನ್ನು 3 ವರ್ಷಗಳ ಅವಧಿಗೆ ನಿಯೋಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News