ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿ.ಟಿ.ರವಿ ನೇಮಕ

Update: 2020-09-26 11:34 GMT

ಬೆಂಗಳೂರು, ಸೆ.26: ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಹಾಗೂ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯರನ್ನು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಆದೇಶ ಹೊರಡಿಸಿದ್ದಾರೆ.

ಜೊತೆಗೆ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರನ್ನು ಬಿಜೆಪಿ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಬಿ.ಎಲ್.ಸಂತೋಷ್ ಅವರನ್ನು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿ ಮುಂದುವರಿಸಲಾಗಿದೆ.

ಸಿ.ಟಿ.ರವಿಗೆ ಸಂಪುಟದಿಂದ ಕೊಕ್?: ಬಿಜೆಪಿ ಪಕ್ಷದಲ್ಲಿ ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮವಿರುವುದರಿಂದ ಸಿ.ಟಿ.ರವಿಯನ್ನು ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಸಂದರ್ಭದಲ್ಲಿ ಕೈಬಿಡುವ ಸಾಧ್ಯತೆಯಿದೆ. ಇದೀಗ, ಸಿ.ಟಿ.ರವಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ ಅಥವಾ ಪಕ್ಷದ ಆದೇಶಕ್ಕೆ ತಲೆ ಬಾಗಿ ರಾಷ್ಟ್ರ ರಾಜಕಾರಣಕ್ಕೆ ಪಾದಾರ್ಪಣೆ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News