×
Ad

ಎಸೆಸೆಲ್ಸಿ: ಸೆ.28ರ ಪರೀಕ್ಷೆ 29ಕ್ಕೆ ಮುಂದೂಡಿಕೆ

Update: 2020-09-26 20:13 IST

ಉಡುಪಿ, ಸೆ.26: ವಿವಿಧ ರೈತ ಸಂಘಗಳು ಹಾಗೂ ಇತರ ಸಂಘಟನೆಗಳು ಸೆ.28ರ ಸೋಮವಾರ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸೆ.28ರಂದು ನಡೆಯಬೇಕಿದ್ದ ಎಸೆಸೆಲ್ಸಿ ಪೂರಕ ಪರೀಕ್ಷೆಯನ್ನು ಮುಂದೂಡ ಲಾಗಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.

ಸೋಮವಾರ ವಿಜ್ಞಾನ, ರಾಜ್ಯಶಾಸ್ತ್ರ ಮತ್ತು ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ ವಿಷಯಗಳ ಪರೀಕ್ಷೆಗಳು ನಡೆಯಬೇಕಾಗಿದ್ದು, ಎಲ್ಲಾ ಪರೀಕ್ಷೆಯನ್ನು ಸೆ.29ಕ್ಕೆ ಮುಂದೂಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News