ಅವೈಜ್ಞಾನಿಕ ಲಾಕ್‌ಡೌನ್‌ನಿಂದ ವಲಸೆ ಕಾರ್ಮಿಕರಿಗೆ ಸಂಕಷ್ಟ: ಸೊರಕೆ

Update: 2020-09-26 14:44 GMT

ಉದ್ಯಾವರ, ಸೆ. 26: ಕೇಂದ್ರ ಸರಕಾರದ ಅವೈಜ್ಞಾನಿಕ ಲಾಕ್‌ಡೌನ್‌ನಿಂದ ಕೋವಿಡ್-19 ಸಾಂಕ್ರಮಿಕ ರೋಗ ನಿಯಂತ್ರಣವಾಗದೇ ವಲಸೆ ಕಾರ್ಮಿಕರ ಮಾರಣಹೋಮಕ್ಕೆ ಕಾರಣವಾಯಿತು. ಕೇಂದ್ರದ ತಪ್ಪು ನಿರ್ಧಾರದಿಂದಾಗಿ ಇಂದು ಭಾರತ ಈ ರೋಗ ಹರಡುವಿಕೆಯಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನಕ್ಕೆ ಏರುವಂತಾಯಿತು ಎಂದು ಮಾಜಿ ಸಚಿವ ವಿನಯಕುಾರ್ ಸೊರಕೆ ಅಭಿಪ್ರಾಯ ಪಟ್ಟಿದ್ದಾರೆ.

ಉದ್ಯಾವರ ಗ್ರಾಮೀಣ ಕಾಂಗ್ರೆಸ್ ಸಮಿತಿ ಕಾರ್ಯಕರ್ತರ ಸಭೆಯನ್ನು ದ್ದೇಶಿಸಿ ಶನಿವಾರ ಮಾತನಾಡಿದ ಅವರು, ಕೊರೋನ ನಿಯಂತ್ರಣ ಎಂಬುದು ಅಕ್ರಮ ದಂಧೆಗಳಿಗೆ ದಾರಿ ಮಾಡಿಕೊಟ್ಟಿತು. ಆದರೂ ಈ ದುರಿತ ಕಾಲದಲ್ಲಿ ಜನರ ಬದುಕಿಗೆ ಸಹಾಯವಾದುದು ಕಾಂಗ್ರೆಸ್ ಸರಕಾರ ಜಾರಿಗೆ ತಂದ ಆಹಾರ ಭದ್ರತೆ ಕಾನೂನು, ನರೇಗಾ ಕಾನೂನು ಮತ್ತು ಕಾಂಗ್ರೆಸ್ ಕಾಲದಲ್ಲಿ ನೇಮಕ ವಾದ ಆಶಾ ಕಾರ್ಯಕರ್ತರು ಎಂಬುದನ್ನು ಮರೆಯಾರದು ಎಂದು ಅವರು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಧಿಕಾರದ ಮೂಲ ಬಿಂದು ಪಂಚಾಯತ್. ಇದು ಸರಕಾರ ಕಟ್ಟುವ ಕೆಲಸವನ್ನು ಮಾಡುತ್ತದೆ. ಹೀಗಾಗಿ ಗ್ರಾಪಂ ಚುನಾವಣೆ ಎಲ್ಲಾ ಚುನಾವಣೆಗಳಿಗಿಂತ ಭಿನ್ನ ಮತ್ತು ಮಹತ್ತರವಾದುದು. ಆದುದರಿಂದ ಕಾರ್ಯಕರ್ತರು ಇಂದಿನಿಂದಲೇ ಪಂಚಾಯತ್ ಚುನಾವಣೆಗೆ ಸಜ್ಜಾಗಬೇಕು ಎಂದು ಸೊರಕೆ ತಿಳಿಸಿದರು.

ಇಂದಿನ ರಾಜ್ಯ ಸರಕಾರ ಯಾವುದೇ ಅಭಿವೃದ್ಧಿ ಕೆಲಸವನ್ನು ಮಾಡದೇ ಕಾಂಗ್ರೆಸ್ ಸರಕಾರ ಮಾಡಿದ ಕಾಮಗಾರಿಗಳನ್ನು ಉದ್ಘಾಟಿಸುತ್ತಾ ಕಾಲ ಕಳೆಯುತ್ತಿದೆ. ಕೊರೊನಾ ಸಾಂಕ್ರಾಮಿಕ ರೋಗವನ್ನು ನಿಭಾಯಿಸಲಾಗದ ಸರಕಾರ, ಅದನ್ನು ಅಕ್ರಮವಾಗಿ ಹಣ ಗಳಿಸುವ ದಂದೆ ಯನ್ನಾಗಿ ಪರಿವರ್ತಿಸಿದೆ ಎಂದು ಕಾಪು ಉತ್ತರ ವಲಯ ಬ್ಲಾಕ್ ಕಾಂಗ್ರೆಸ್ ಸಮಿತಿಯ ವೀಕ್ಷಕ ನೀರೆ ಕೃಷ್ಣ ಶೆಟ್ಟಿ ನುಡಿದರು.

ವೇದಿಕೆಯಲ್ಲಿ ಕಾಪು ಉತ್ತರ ವಲಯ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಚರಣ್ ವಿಠಲ್, ಇಂಟಕ್ ಅಧ್ಯಕ್ಷ ಉಮೇಶ್ ಕಾಂಚನ್, ಉದ್ಯಾವರ ಗ್ರಾಪಂ ಮಾಜಿ ಅಧ್ಯಕ್ಷೆ ಸುಗಂಧಿ ಶೇಖರ್, ರಿಯಾಝ್ ಪಳ್ಳಿ ಉಪಸ್ಥಿತರಿದ್ದರು.

ಪ್ರಾರಂಭದಲ್ಲಿ ಉದ್ಯಾವರ ಗಾ್ರುೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗಿರೀಶ್ ಕುಮಾರ್ ಸ್ವಾಗತಿಸಿದರೆ, ಮಾಜಿ ಅಧ್ಯಕ್ಷ ಉದ್ಯಾವರ ನಾಗೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಆಬಿದ್ ಆಲಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಾರ್ಯಕ್ರಮದಲ್ಲಿ ಅಗಲಿದ ಮಹಾನ್ ಹಿನ್ನಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆತ್ಮಕ್ಕೆ ಚಿರಶಾಂತಿ ಕೋರಿ ವೌನ ಪ್ರಾರ್ಥನೆ ಸಲ್ಲಿಸಲಾಯಿತು. ಸಭೆಯಲ್ಲಿ ಕೆಪಿಸಿಸಿ ಆರೋಗ್ಯ ಹಸ್ತ ಸ್ವಯಂ ಸೇವಕರಿಗೆ ಕಿಟ್ ವಿತರಿಸಲಾಯಿತು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News