ಕೋವಿಡ್19 ನಿಯಂತ್ರಣಕ್ಕೆ ಪಿಪಿಇ ಕಿಟ್ ಧರಿಸಿದ ಶುಶ್ರೂಷಕರಿಗೆ ಪ್ರೋತ್ಸಾಹ ಧನ: ರಾಜ್ಯ ಸರಕಾರ ಆದೇಶ

Update: 2020-09-26 18:01 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.26: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕೋವಿಡ್-19 ಸಲುವಾಗಿ ಪಿಪಿಇ ಕಿಟ್ ಧರಿಸಿ ಕಾರ್ಯ ನಿರ್ವಹಿಸುತ್ತಿರುವ ಶುಶ್ರೂಷಕರಿಗೆ 5 ಸಾವಿರ ರೂಪಾಯಿಗಳನ್ನು ತಾತ್ಕಾಲಿಕವಾಗಿ ಕೋವಿಡ್ ರಿಸ್ಕ್ ಪ್ರೋತ್ಸಾಹ ಧನವನ್ನು ನೀಡಲು ಮಂಜೂರಾತಿ ನೀಡಲಾಗಿರುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶದಲ್ಲಿ ತಿಳಿಸಿದೆ.

ಆರೋಗ್ಯ ಇಲಾಖೆಯ ವ್ಯಾಪ್ತಿಯಡಿಯಲ್ಲಿ ಬರುವ ಆಸ್ಪತ್ರೆಗಳಲ್ಲಿನ ಕೋವಿಡ್ ಹೆಲ್ತ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕೋವಿಡ್ ನಿಯಂತ್ರಿಸುವ ಸಲುವಾಗಿ ಪಿಪಿಇ ಕಿಟ್ ಧರಿಸಿ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಶುಶ್ರೂಷಕರುಗಳಿಗೆ ಉತ್ತೇಜನ ನೀಡುವ ಸಲುವಾಗಿ ಮಾಸಿಕ 5 ಸಾವಿರ ರೂ. ಕೋವಿಡ್ ರಿಸ್ಕ್ ಪ್ರೋತ್ಸಾಹಧನವನ್ನು ತಾತ್ಕಾಲಿಕವಾಗಿ 6 ತಿಂಗಳ ಅವಧಿಗೆ ನೀಡಲು ಸರಕಾರವು ತೀರ್ಮಾನಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News