ಬೆಂಗಳೂರು: 4,083 ಕೊರೋನ ಪ್ರಕರಣಗಳು ದೃಢ, 2,494 ಮಂದಿ ಗುಣಮುಖ

Update: 2020-09-26 18:30 GMT

ಬೆಂಗಳೂರು, ಸೆ.21: ನಗರದಲ್ಲಿ ಶನಿವಾರ ಒಂದೇ ದಿನ 4,083 ಜನರಿಗೆ ಕೊರೋನ ಸೋಂಕು ದೃಢಪಟ್ಟಿದೆ. 2,494 ಸೋಂಕಿತರು ಆಸ್ಪತ್ರೆಯಿಂದ ಮನೆಗೆ ತೆರೆಳಿದ್ದು, 27 ಜನರು ಮೃತರಾಗಿದ್ದಾರೆ.

ನಗರದಲ್ಲಿ ಒಟ್ಟು 2,16,630 ಸೋಂಕಿತರು ದೃಢಪಟ್ಟಿದ್ದು, ಇಲ್ಲಿಯವರೆಗೆ ನಗರದಲ್ಲಿ 2,821 ಜನರು ಸೋಂಕಿಗೆ ಬಲಿಯಾಗಿದ್ದಾರೆ. 1,70,430 ಜನರು ಇಲ್ಲಿಯವರೆಗೆ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳು ಒಳಗೊಂಡಂತೆ 43,378 ಜನ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ 150 ಜ್ವರ ಚಿಕಿತ್ಸಾಲಯದಲ್ಲಿ ಒಟ್ಟು 2,64,969 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ.

ಶುಕ್ರವಾರದ ಬಿಬಿಎಂಪಿ ಕೋವಿಡ್ ವರದಿ ಪ್ರಕಾರ ಸಿಟಿಯಲ್ಲಿ ಒಟ್ಟು ಸಕ್ರಿಯ 16 ಕಂಟೈನ್ಮೆಂಟ್ ಝೋನ್‍ಗಳಿವೆ. ನಗರದ 5,89,063 ಪ್ರಾಥಮಿಕ ಸಂಪರ್ಕಿರನ್ನು ಗುರುತಿಸಲಾಗಿದ್ದು, ದ್ವಿತೀಯ ಸಂಪರ್ಕಿತ 7,16,631 ಜನರನ್ನು ಗುರುತಿಸಲಾಗಿದೆ. ನಗರದಲ್ಲಿ 15,35,558 ಜನರಿಗೆ ಕೊರೋನ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ ಪಾಸಿಟಿವ್ ಪ್ರಮಾಣ ಶೇ.13.84ರಷ್ಟಿದೆ. ಕೊರೋನಕ್ಕೆ ಮೃತರಾಗುತ್ತಿರುವ ಪ್ರಮಾಣ ಶೇ.1.32ರಷ್ಟಿದ್ದು, ಗುಣಮುಖರಾಗುತ್ತಿರುವ ಪ್ರಮಾಣ ಶೇ.79.01ರಷ್ಟಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News