ಕಾಜೂರು‌ ದರ್ಗಾ ಶರೀಫ್‌ನಲ್ಲಿ ಮಾಸಿಕ ದಿಕ್ರ್ ಸ್ವಲಾತ್ ಕಾರ್ಯಕ್ರಮಕ್ಕೆ ಚಾಲನೆ

Update: 2020-09-27 05:05 GMT

ಬೆಳ್ತಂಗಡಿ, ಸೆ.27: ಕಾಜೂರು ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್‌ನಲ್ಲಿ ಮಾಸಿಕ ಸ್ವಲಾತ್ ಮಜ್ಲಿಸ್‌ಗೆ ಸೆ.24ರಂದು ಚಾಲನೆ ದೊರೆಯಿತು.

ಕಾಜೂರು ಖತೀಬ್ ಸೈಯದ್ ಕಾಜೂರು ತಂಙಳ್ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.

ಸರಕಾರದ ಕೋವಿಡ್ ನಿಯಮಾವಳಿಯಂತೆ ಮಾಸ್ಕ್ ಧರಿಸಿ, ಸುರಕ್ಷಿತ ಅಂತರ ಕಾಪಾಡಿಕೊಂಡು ಕಾರ್ಯಕ್ರಮ ನಡೆಯಿತು.

ಸಮಿತಿಯ ಅಧ್ಯಕ್ಷ ಕೆ.ಯು ಇಬ್ರಾಹೀಂ, ಪ್ರಧಾನ ಕಾರ್ಯದರ್ಶಿ ಜೆ.ಎಚ್.ಅಬೂಬಕರ್ ಸಿದ್ದೀಕ್, ಕೋಶಾಧಿಕಾರಿ ಕೆ.ಎಂ.ಕಮಾಲ್ ಸಹಿತ ಧರ್ಮಗುರುಗಳು, ಸಮಿತಿಯ ಪದಾಧಿಕಾರಿಗಳು, ಸದಸ್ಯರು ಭಾಗಿಯಾಗಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News