ಸಮುದಾಯ ಸಹಭಾಗಿತ್ವದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ: ಜಿಲ್ಲಾಧಿಕಾರಿ ಡಾ.ರಾಜೇಂದ್ರ

Update: 2020-09-27 06:37 GMT

ಮಂಗಳೂರು, ಸೆ.27: ಸಮುದಾಯದ ಸಹಭಾಗಿತ್ವದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯ ಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಯೋಜನೆಯನ್ನು ರೂಪಿಸುವ ಗುರಿ ಹೊಂದಿ ರುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ವಿಶ್ವ ಪ್ರವಾಸೋದ್ಯಮದ ದಿನದ ಅಂಗವಾಗಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ನಗರದ ತಣ್ಣೀರುಬಾವಿ ಕಡಲ ತೀರದಲ್ಲಿ ಹಮ್ಮಿಕೊಂಡ ‘ಸ್ವಚ್ಛತಾ ಪಕ್ವಾಡ-2020’ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ 17 ಕೋಟಿ ರೂ.ಗಳ ಯೋಜನೆಯನ್ನು ರೂಪಿಸಲಾಗಿದೆ. ಈಗಾಗಲೇ 9 ಕೋಟಿ ರೂ. ಬಿಡುಗಡೆಯಾಗಿದೆ. ಮುಂದಿನ ಒಂದು ತಿಂಗಳು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಪ್ರವಾಸೋ ದ್ಯಮ ಅಭಿವೃದ್ಧಿಯ ಬಗ್ಗೆ ಜನಾಭಿಪ್ರಾಯವನ್ನು ಸಂಗ್ರಹಿಸಿ ಮುಂದಿನ ಹಂತದಲ್ಲಿ ರೂಪಿಸುವ ಉದ್ದೇಶ ಹೊಂದಿರುವುದಾಗಿ ಜಿಲ್ಲಾಧಿಕಾರಿ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ದೇವಸ್ಥಾನ ಹಾಗೂ ಪ್ರಾಚೀನ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಇಲ್ಲಿಗೆ ಭೇಟಿ ನೀಡುವವರು ಹೆಚ್ಚು ಹೆಚ್ಚು ತಿಳಿದುಕೊಳ್ಳಲು ಅನುಕೂಲವಾಗುವಂತೆ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವ ಉದ್ದೇಶ ಹೊಂದಿರುವುದಾಗಿ ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರವಾಸೋದ್ಯಮ ಇಲಾಖೆಯ ಮೂಲಕ ನಿರ್ಮಿಸಿದ ದಾರಿಸೂಚಕ ಫಲಕವನ್ನು ಉದ್ಘಾಟಿಸಲಾಯಿತು.

ಮನಪಾ ಆಯುಕ್ತ ಅಕ್ಷಯ್ ಶ್ರೀಧರ, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕ ಸೋಮಶೇಖರ, ಕೆನರಾ ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿ ಅಧ್ಯಕ್ಷ ಐಸಾಕ್ ವಾಝ್, ಹೊಟೇಲ್ ಅಸೋಸಿಯೇಶನ್ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಯೋಜಕ ಇಂಡಿಯಾ ಪ್ರೈ. ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಜಗದೀಶ್ ಬೋಳೂರು, ಮನಪಾ ಸದಸ್ಯೆ ಸುನೀತಾ ಮೊದಲಾದವರು ಉಪಸ್ಥಿತರಿದ್ದರು.

ಮಂಜುನಾಥ್ ಕಾರ್ಯಕ್ರಮ ನಿರೂಪಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News