ಕೇರಳದ ಹಿರಿಯ ಕಾಂಗ್ರೆಸ್ ಮುಖಂಡ ಸಿ.ಎಫ್. ಥಾಮಸ್ ನಿಧನ

Update: 2020-09-27 07:21 GMT

ಕೊಟ್ಟಾಯಂ, ಸೆ.27: ಕೇರಳದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಚಂಗನಶೇರಿ ಶಾಸಕ ಸಿ.ಎಫ್. ಥಾಮಸ್ ಜಿಲ್ಲೆಯ ತಿರುವಲ್ಲದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ನಿಧನರಾದರು ಪಕ್ಷದ ಮೂಲಗಳು ತಿಳಿಸಿವೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.

ಥಾಮಸ್ ಅವರು ಕೆಲವು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು.

ಥಾಮಸ್ ಅವರು 1980ರಿಂದ ಸತತವಾಗಿ ಚಂಗನಶೇರಿ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. 2001-2006ರ ಅವಧಿಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರಕಾರದಲ್ಲಿ ಗ್ರಾಮೀಣಾಭಿವೃದ್ದಿ, ನೋಂದಣಿ, ಖಾದಿ ಹಾಗೂ ಗ್ರಾಮೀಣ ಕೈಗಾರಿಕೆಗಳ ಖಾತೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ವಿದ್ಯಾರ್ಥಿಯಾಗಿದ್ದಾಗಲೇ ರಾಜಕೀಯಕ್ಕೆ ಕಾಲಿಟ್ಟ ಥಾಮಸ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ್ನು ಸೇರ್ಪಡೆಯಾದರು. ಬಳಿಕ ಚಂಗನಶೇರಿ ಪಟ್ಟಣ(ಪಶ್ಚಿಮ)ಮಂಡಲಂನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಕೇರಳ ಕಾಂಗ್ರೆಸ್‌ಗೆ ಸೇರಿದ ಅವರು ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು. ಕೇರಳ ಕಾಂಗ್ರೆಸ್(ಎಂ) ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News