ಉಡುಪಿಗೆ 40ಕೋ.ರೂ. ತುರ್ತು ಪರಿಹಾರ; ನಿಧಿ ಬಿಡುಡೆಗೆ ಸಿಎಂ ಸೂಚನೆ: ರಘುಪತಿ ಭಟ್

Update: 2020-09-27 12:02 GMT

ಉಡುಪಿ, ಸೆ.27: ಉಡುಪಿ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಅಪಾರ ಪ್ರಮಾಣದ ಆಸ್ತಿಪಾಸ್ತಿ ನಷ್ಟವಾಗಿರುವುದರಿಂದ ಮೊದಲ ಹಂತದಲ್ಲಿ 40 ಕೋಟಿ ರೂ. ತುರ್ತು ಪರಿಹಾರ ನಿಧಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರ್ಥಿಕ ಇಲಾಖೆಗೆ ಸೂಚನೆ ನೀಡಿದ್ದಾರೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.

ಸೆ.26ರಂದು ಜಿಲ್ಲೆಯ ಎಲ್ಲ ಶಾಸಕರು, ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಡಿ ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿತ್ತು. ಶಾಸಕರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಮೊದಲ ಹಂತದಲ್ಲಿ 40 ಕೋಟಿ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಅವರಿಗೆ ಸೂಚನೆ ನೀಡಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News