ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು

Update: 2020-09-27 13:13 GMT

ಬೆಂಗಳೂರು, ಸೆ.27: ನಗರದ ನಾಯಂಡಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‍ನಿಂದ ಅಗ್ನಿ ಅವಘಡ ಸಂಭವಿಸಿದೆ.

ಫಾಝಿಲ್ ಎಂಬುವರಿಗೆ ಸೇರಿದ ಫ್ಯಾಕ್ಟರಿ ಇದಾಗಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಪ್ಲಾಸ್ಟಿಕ್ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ತಿಳಿದುಬಂದಿದೆ

ಶನಿವಾರ ತಡರಾತ್ರಿ ಅವಘಡ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಸಂಪೂರ್ಣ ಫ್ಯಾಕ್ಟರಿ ಅಗ್ನಿಗಾಹುತಿಯಾಗಿದೆ. ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆ ನಾಗರಬಾವಿ ವಿಭಾಗದ 8 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News