ಸೆ. 28ರಂದು ದ.ಕ. ಜಿಲ್ಲೆಯಲ್ಲಿ ಬಸ್ ಬಂದ್ ಇಲ್ಲ: ಕೆಎಸ್ಸಾರ್ಟಿಸಿ

Update: 2020-09-27 13:51 GMT

ಮಂಗಳೂರು, ಸೆ.27: ಕೇಂದ್ರ ಹಾಗೂ ರಾಜ್ಯ ಸರಕಾರಗಳು ಅಂಗೀಕರಿಸಿರುವ ಕೃಷಿ ಸಂಬಂಧಿತ ಕಾನೂನುಗಳು ರೈತ ವಿರೋಧಿ ಎಂದು ಆರೋಪಿಸಿ ಸೆ.28ರ (ಸೋಮವಾರ) ಬಂದ್‌ಗೆ ದ.ಕ.ಜಿಲ್ಲೆಯ ವಿವಿಧ ರೈತ ಪರ ಸಂಘಟನೆಗಳು ಮತ್ತು ಕೆಲವು ರಾಜಕೀಯ ಪಕ್ಷಗಳು ಸಂಪೂರ್ಣ ಬೆಂಬಲ ಸೂಚಿಸಿದೆ. ಆದರೆ ಖಾಸಗಿ ಮತ್ತು ಸರಕಾರಿ ಬಸ್‌ಗಳು ಎಂದಿನಂತೆ ಸಂಚರಿಸಲಿದೆ.

ರೈತ ಪರ ಸಂಘಟನೆಗಳು ಮತ್ತು ರಾಜಕೀಯ ಪಕ್ಷಗಳು ಜಿಲ್ಲೆಯ ವಿವಿಧೆಡೆ ಧರಣಿ, ಮೆರವಣಿಗೆ, ರಸ್ತೆ ತಡೆ ಚಳವಳಿ ನಡೆಸಲು ಮುಂದಾಗಿದ್ದರೆ, ಮುನ್ನೆಚ್ಚರಿಕೆಯ ಕ್ರಮವಾಗಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪೊಲೀಸ್ ಇಲಾಖೆಯು ಪೊಲೀಸ್ ಬಲವನ್ನು ಹೆಚ್ಚಿಸಿವೆ. ಅಲ್ಲದೆ, ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲು ನಿರ್ಧರಿಸಿದೆ.

ರೈತ, ದಲಿತ, ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟದ ಆಶ್ರಯದಲ್ಲಿ ಬಂಟ್ವಾಳ ಮತ್ತು ಸುಳ್ಯದಲ್ಲಿ ಧರಣಿ ಸಹಿತ ರಸ್ತೆ ತಡೆ ನಡೆಸಲಾಗು ವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ರವಿ ಕಿರಣ್ ಪುಣಚ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಿನಿ ವಿಧಾನ ಸೌಧದ ಮುಂದೆ ರೈತ, ದಲಿತ, ಕಾರ್ಮಿಕ ಜನಪರ ಚಳವಳಿಗಳ ಒಕ್ಕೂಟದ ಆಶ್ರಯದಲ್ಲಿ ಕೆಲವು ರಾಜಕೀಯ ಪಕ್ಷಗಳ ಸಹಯೋಗದಲ್ಲಿ ಧರಣಿ-ಸಭೆ ಮತ್ತು ರಸ್ತೆ ತಡೆ ಚಳವಳಿಯು ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.

ಎಂದಿನಂತೆ ಬಸ್ ಸಂಚಾರ

ಸೆ.28ರಂದು ಬಸ್ ಸಂಚಾರ ನಿಲ್ಲಿಸುವ ಬಗ್ಗೆ ಕೇಂದ್ರ ಕಚೇರಿಯಿಂದ ಅಧಿಕೃತ ಸೂಚನೆ ಬಂದಿಲ್ಲ. ಹಾಗಾಗಿ ಎಂದಿನಂತೆ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಖಾಸಗಿ ಸಿಟಿ ಮತ್ತು ಸರ್ವಿಸ್ ಬಸ್‌ಗಳು ಕೂಡ ಎಂದಿನಂತೆ ಸಂಚಾರ ನಡೆಸಲಿದೆ ಎಂದು ದ.ಕ.ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News