ಎಲ್ಲ ಮೂರು ಕೃಷಿ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

Update: 2020-09-27 17:24 GMT

ಹೊಸದಿಲ್ಲಿ, ಸೆ.27: ವಿವಾದಾತ್ಮಕ ಮಸೂದೆಗಳ ಅಂಗೀಕಾರದ ವಿರುದ್ಧ ಪ್ರತಿಪಕ್ಷಗಳು ಮತ್ತು ರೈತರ ಪ್ರತಿಭಟನೆಗಳು ಹೆಚ್ಚುತ್ತಿರುವ ನಡುವೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ರವಿವಾರ ಮೂರು ಕೃಷಿ ಮಸೂದೆಗಳಿಗೆ ಅಂಕಿತ ಹಾಕಿದ್ದಾರೆ.

ರೈತರ ಉತ್ಪನ್ನ ಮಾರಾಟ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ 2020,ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕುರಿತು ರೈತರ (ಸಬಲೀಕರಣ ಮತ್ತು ರಕ್ಷಣೆ) ಒಪ್ಪಂದ 2020 ಹಾಗೂ ಅಗತ್ಯ ಸಾಮಗ್ರಿಗಳ (ತಿದ್ದುಪಡಿ) ಮಸೂದೆ 2020 ಇವು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದುಕೊಂಡಿರುವ ಮಸೂದೆಗಳಾಗಿವೆ.

ಕೃಷಿ ಮಸೂದೆಗಳನ್ನು ವಿರೋಧಿಸಿ ಆಡಳಿತ ಬಿಜೆಪಿಯ ಅತ್ಯಂತ ಹಳೆಯ ಮಿತ್ರಪಕ್ಷ ಶಿರೋಮಣಿ ಅಕಾಲಿ ದಳ (ಎಸ್‌ಎಡಿ)ವು ಶನಿವಾರ ಎನ್‌ಡಿಎ ಮೈತ್ರಿಕೂಟವನ್ನು ತೊರೆದಿದೆ. ಅದು ವಾರದ ಹಿಂದೆ ಕೇಂದ್ರ ಸರಕಾರದಿಂದಲೂ ಹೊರಗೆ ಬಂದಿತ್ತು. ಇವೆರಡು ಪಕ್ಷಗಳು ಹಲವಾರು ಅವಧಿಗಳಿಗೆ ಕೇಂದ್ರ ಮತ್ತು ಪಂಜಾಬಿನಲ್ಲಿ ಅಧಿಕಾರ ಹಂಚಿಕೊಂಡಿದ್ದವು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News