ಮಂಗಳೂರು : ವಿಮಾನ ನಿಲ್ದಾಣದಲ್ಲಿ 33 ಲಕ್ಷ ರೂ. ಮೌಲ್ಯದ ಚಿನ್ನ ವಶ

Update: 2020-09-27 15:14 GMT

ಮಂಗಳೂರು, ಸೆ. 27: ಕಸ್ಟಮ್ಸ್ ಗುಪ್ತಚರ ಘಟಕದ ಅಧಿಕಾರಿಗಳು ರವಿವಾರ ಮಂಗಳೂರು ವಿಮಾನ ನಿಲ್ದಾಣದಲ್ಲಿ ದುಬೈನಿಂದ ಬಂದಿಳಿದ ವಿಮಾನದಿಂದ 33.88 ಲಕ್ಷ ರೂ. ಮೌಲ್ಯದ 671 ಗ್ರಾಂ ತೂಕದ 6 ಚಿನ್ನದ ಬಿಸ್ಕತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಚಿನ್ನದ ಬಿಸ್ಕತ್ತುಗಳನ್ನು ವಿಮಾನದ ಒಳಗೆ ಸೀಟಿನ ಅಡಿಯಲ್ಲಿ ಅಡಗಿಸಿಡಲಾಗಿತ್ತು.

ಈ ವಿಮಾನವು ದುಬೈ- ಮಂಗಳೂರು- ಹೈದರಾಬಾದ್ ನಡುವೆ ಸಂಚಾರ ನಡೆಸುತ್ತಿದೆ. ದುಬೈನಿಂದ ಮಂಗಳೂರು ತನಕ ಅಂತಾರಾಷ್ಟ್ರೀಯ ಯಾನವಾಗಿ ಹಾಗೂ ಮಂಗಳೂರು- ಹೈದರಾಬಾದ್ ನಡುವೆ ದೇಶೀಯ ವಿಮಾನವಾಗಿ ಕಾರ್ಯಾಚರಿಸುತ್ತಿದ್ದು, ಮಂಗಳೂರಿನಿಂದ ಹೈದರಾಬಾದ್‌ಗೆ ಪ್ರಯಾಣಿಸುವ ಪ್ರಯಾಣಿಕ ಈ ಚಿನ್ನವನ್ನು ಸಂಗ್ರಹಿಸಿ ಕೊಂಡೊಯ್ಯುವ ಉದ್ದೇಶ ಹೊಂದಿದ್ದ ಎನ್ನಲಾಗಿದೆ.

ದೇಶೀಯ ಯಾನ ಆಗಿರುವುದರಿಂದ ವಿಮಾನದಲ್ಲಿ ಕಟ್ಟುನಿಟ್ಟಿನ ತಪಾಸಣೆ ಇರಲಾರದು ಎಂದು ಭಾವಿಸಿ ಈ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಲಾಗಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News