ಕಿಶನ್ ಹೆಗ್ಡೆ ಕೊಲೆ ಪ್ರಕರಣ: ಆರೋಪಿಗಳು ಪೊಲೀಸ್ ಕಸ್ಟಡಿಗೆ

Update: 2020-09-27 16:06 GMT

ಉಡುಪಿ, ಸೆ. 27: ಹಿರಿಯಡ್ಕ ಪೇಟೆಯಲ್ಲಿ ಸೆ.24ರಂದು ಹಾಡುಹಗಲೇ ನಡೆದ ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಐವರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿ ಒಪ್ಪಿಸಿದೆ.

ಆರೋಪಿಗಳಾದ ಮನೋಜ್ ಕೋಡಿಕೆರೆ, ಚಿತ್ತರಂಜನ್ ಪೂಜಾರಿ, ಚೇತು ಪಡೀಲ್, ರಮೇಶ್ ಪೂಜಾರಿ, ದೀಕ್ಷಿತ್ ಶೆಟ್ಟಿ ಎಂಬವರನ್ನು ತನಿಖಾಧಿಕಾರಿ ಯಾಗಿರುವ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ವಿಡಿಯೋ ಕಾನ್ಫೆ ರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾ ಧೀಶರು ಆರೋಪಿಗಳನ್ನು ಅ.1ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅದರಂತೆ ಕಸ್ಟಡಿಗೆ ಪಡೆದುಕೊಂಡಿರುವ ಪೊಲೀಸರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ. ಈ ಪ್ರಕರಣದಲ್ಲಿ ಭಾಗಿಯಾ ಗಿರುವ ಇತರರ ಬಗ್ಗೆ ಮಾಹಿತಿ ಕಳೆಹಾಕಲಾಗುತ್ತಿದೆ. ಕೊಲೆ ನಡೆಸಿದ ಸ್ಥಳಕ್ಕೆ ಆರೋಪಿಗಳನ್ನು ಕರೆದೊಯ್ದು ಮಹಜರು ಪ್ರಕ್ರಿಯೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News