ನಿವೃತ್ತ ಶಿಕ್ಷಕ ಆತ್ಮಹತ್ಯೆ

Update: 2020-09-27 16:07 GMT

ಕಾಪು, ಸೆ.27: ನಿವೃತ್ತ ಶಿಕ್ಷಕರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.26ರಂದು ರಾತ್ರಿ ವೇಳೆ ಕಟಪಾಡಿ ಸಮೀಪದ ಅಚ್ಚಡ ಕ್ರಾಸ್‌ನ ವಿದ್ಯಾನಗರ ಎಂಬಲ್ಲಿ ನಡೆದಿದೆ.

ಮೃತರನ್ನು ವಿದ್ಯಾನಗರ ನಿವಾಸಿ ಅಪ್ಪು ಪೂಜಾರಿ (66) ಎಂದು ಗುರುತಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಇವರು, ಕೆಲವು ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ಇವರು, ಕೋಣೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖ ಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News