ಗ್ರಾಪಂ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕೆ: ಯೋಗೀಶ್ ಶೆಟ್ಟಿ

Update: 2020-09-27 16:26 GMT

ಉಡುಪಿ, ಸೆ.27: ಈ ಬಾರಿಯ ಗ್ರಾಪಂ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಜಿಲ್ಲೆಯ ಎಲ್ಲಾ ಗ್ರಾಪಂಗಳಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿ ಸಲಿದೆ. ಈಗಾಗಲೇ 50 ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಲಾಗಿದ್ದು, ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಾಗುವುದು ಎಂದು ಜೆಡಿಎಸ್ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ತಿಳಿಸಿದ್ದಾರೆ.

ಉಡುಪಿ ಜಿಲ್ಲಾ ಪಕ್ಷದ ಕಚೇರಿಯಲ್ಲಿಂದು ಕರೆದ ಮಾತನಾಡಿದ ಅವರು, ಸೆ.28ರ ಕರ್ನಾಟಕ ಬಂದ್‌ಗೆ ಜೆಡಿಎಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ. ರಾಜ್ಯ ಸರಕಾರ ಕೋವಿಡ್-19 ನಿಯಂತ್ರಿ ಸುವಲ್ಲಿ ವಿಲವಾಗಿದೆ. ಸರಕಾರದ ನೀತಿಯಿಂದ ಜನಸಾಮಾನ್ಯರಿಗೆ, ರೈತರಿಗೆ, ಕೂಲಿ ಕಾರ್ಮಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಕಳೆದ ವಾರ ಉಂಟಾದ ಜಲಪ್ರಳಯದಿಂದಾಗಿ ಕೋಟ್ಯಾಂತರ ರೂ. ನಷ್ಟ ಉಂಟಾಗಿದೆ. ಈ ನಿಟ್ಟಿನಲ್ಲಿ ಸಂತ್ರಸ್ತರಿಗೆ ಗರಿಷ್ಠ ಪ್ರಮಾಣದ ಪರಿಹಾರವನ್ನು ಶೀಘ್ರವೇ ನೀಡಬೆೀಕು ಎಂದು ಅವರು ಆಗ್ರಹಿಸಿದರು.

ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷಕ್ಕೆ ಜಿಲ್ಲೆಯ ಪ್ರಭಾವಿ ನಾಯಕರೊಬ್ಬರು ಶೀಘ್ರವೇ ಸೇರ್ಪಡೆಯಾಗಲಿದ್ದಾರೆ. ಈ ಬಗ್ಗೆ ಸಾಕಷ್ಟು ಬಾರಿ ಚರ್ಚೆ ಮಾಡಿದ್ದು, ರಾಜ್ಯ ನಾಯಕರನ್ನು ಆಮಂತ್ರಿಸಿ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಗು ವುದು ಎಂದು ಅವರು ತಿಳಿಸಿದರು.

ಜೆಡಿಎಸ್ ಕಾರ್ಯಾಧ್ಯಕ್ಷ ವಾಸುದೇವ ರಾವ್, ಮುಖಂಡರಾದ ಗಂಗಾಧರ್ ಬಿರ್ತಿ, ಶೇಖರ್ ಕೋಟ್ಯಾನ್, ಉದಯ್ ಹೆಗ್ಡೆ, ಸುಧಾಕರ್ ಶೆಟ್ಟಿ, ಪ್ರಭಾಕರ್, ಅಬ್ದುಲ್ ಖಾದರ್, ಬಿ.ಟಿ.ಮಂಜುನಾಥ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News