ಶಾಲೆ ಪ್ರಾರಂಭದ ಬಗ್ಗೆ ಎಲ್ಲಾ ಶಾಸಕರಿಗೆ ಪತ್ರ ಬರೆದ ಶಿಕ್ಷಣ ಸಚಿವರು

Update: 2020-09-27 16:45 GMT

ಬೆಂಗಳೂರು, ಸೆ.27: ಶಾಲೆಗಳನ್ನು ಆರಂಭಿಸುವ ಕುರಿತು ಸಲಹೆ ನೀಡಲು ಮನವಿ ಮಾಡಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‍ ಕುಮಾರ್ ಅವರು ಎಲ್ಲಾ ಕ್ಷೇತ್ರದ ಶಾಸಕರಿಗೆ ಪತ್ರ ಬರೆದಿದ್ದಾರೆ.

ಜೂನ್‍ನಲ್ಲಿ ಆರಂಭವಾಗಬೇಕಿದ್ದ ಪ್ರಸಕ್ತ ಶೈಕ್ಷಣಿಕ ಸಾಲಿನ ಚಟುವಟಿಕೆಗಳು ಇನ್ನೂ ಪೂರ್ಣ ಪ್ರಮಾಣದಲ್ಲಿ ಪ್ರಾರಂಭಗೊಂಡಿಲ್ಲ. ಹಾಗೆಯೇ ಇದು ಹಲವಾರು ಸಾಮಾಜಿಕ ಪಿಡುಗುಗಳಿಗೂ ಕಾರಣವಾಗುತ್ತಿದೆ. ಈ ಪರಿಸ್ಥಿತಿಯಲ್ಲಿ ಶಾಲೆ ಆರಂಭ ಮತ್ತು ಸಮುದಾಯದ ಸಹಕಾರ ಕುರಿತಂತೆ ತಮ್ಮ ಸಲಹೆ ಸೂಚನೆಗಳನ್ನು ನೀಡಬೇಕೆಂದು ಕೋರಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್‍ ಕುಮಾರ್ ರಾಜ್ಯದ ಎಲ್ಲಾ ಶಾಸಕರಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದಾರೆ.

ನಮ್ಮ ರಾಜ್ಯದಲ್ಲಿ ಶಾಲೆಗಳನ್ನು(ಎಲ್‍ಕೆಜಿಯಿಂದ ಪಿಯುಸಿವರೆಗೆ) ಯಾವಾಗ ಪ್ರಾರಂಭಿಸಬಹುದು? ಒಂದು ವೇಳೆ ಶಾಲೆ ಆರಂಭ ಮಾಡಿದ್ದಲ್ಲಿ ಯಾವ ತರಗತಿಗಳನ್ನು ನಾವು ಮೊದಲು ಪ್ರಾರಂಭಿಸಬಹುದು? ಮತ್ತು ಸಮುದಾಯ ಹಾಗೂ ಜನಪ್ರತಿನಿಧಿಗಳಿಂದ ಶಿಕ್ಷಣ ಇಲಾಖೆ ಯಾವ ರೀತಿಯಿಂದ ಸಹಕಾರ ನಿರೀಕ್ಷಿಸಬಹುದು? ಎನ್ನುವ ಕುರಿತು ಸಲಹೆ ಸೂಚನೆಗಳನ್ನು ಒಂದೆರೆಡು ದಿನಗಳಲ್ಲಿ ಇ-ಮೇಲ್‍ಅಥವಾ ಪತ್ರ ಮುಖೇನ ತಿಳಿಸುವಂತೆ ಅವರು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News