ಸಂಘಟಿತ ಪ್ರದರ್ಶನ: ಪಂಜಾಬ್ ವಿರುದ್ಧದ ಪಂದ್ಯ ಗೆದ್ದು ಬೀಗಿದ ರಾಜಸ್ಥಾನ್ ರಾಯಲ್ಸ್

Update: 2020-09-27 17:57 GMT

ಶಾರ್ಜಾ, ಸೆ.27: ಸಂಘಟಿತ ಹೋರಾಟ ಪ್ರದರ್ಶಿಸಿದ ರಾಜಸ್ಥಾನ ರಾಯಲ್ಸ್ ತಂಡವು ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಬೃಹತ್ ಮೊತ್ತದ ಐಪಿಎಲ್ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳಿಂದ ಗೆದ್ದು ಬೀಗಿದೆ.

ಗೆಲುವಿಗೆ 224 ರನ್ ಗಳ ಗುರಿ ಪಡೆದ ರಾಜಸ್ಥಾನ ರಾಯಲ್ಸ್ ತಂಡವು 19.3 ಓವರ್ ಗಳಲ್ಲಿ 6 ವಿಕೆಟ್ ನಷ್ಟದಲ್ಲಿ 226 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಈ ಮೂಲಕ ತಾನಾಡಿದ ಎರಡೂ ಪಂದ್ಯಗಳನ್ನು ಗೆದ್ದಿದೆ. ಪಂಜಾಬ್ ಮೂರು ಪಂದ್ಯಗಳಲ್ಲಿ ಎರಡರಲ್ಲಿ ಸೋತಿದೆ.

ರಾಜಸ್ಥಾನದ ಪರ ಸ್ಟೀವನ್ ಸ್ಮಿತ್ 27 ಎಸೆತಗಳಲ್ಲಿ 50, ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 85 ಹಾಗೂ ರಾಹುಲ್ ತಿವಾಟಿಯ 31 ಎಸೆತಗಳಲ್ಲಿ 53 ರನ್ ಸಿಡಿಸಿದರು. ಪಂಜಾಬ್ ಪರ ಮುಹಮ್ಮದ್ ಶಮಿ ಮೂರು ವಿಕೆಟ್ ಪಡೆದರು.

ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಮಯಾಂಕ್ ಅಗರವಾಲ್ ಭರ್ಜರಿ ಶತಕದ ನೆರವಿನಿಂದ ನಿಗದಿತ 20 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿತ್ತು. ಮಯಾಂಕ್ ಕೇವಲ 50 ಎಸೆತಗಳಲ್ಲಿ 106 ರನ್ (10 ಬೌಂಡರಿ, 6 ಸಿಕ್ಸ್) ಗಳಿಸಿ ಮಿಂಚಿದರು. ಮತ್ತೊಂದೆಡೆ ತಂಡದ ನಾಯಕ ಕೆ.ಎಲ್ ರಾಹುಲ್ 54 ಎಸೆತಗಳಲ್ಲಿ 69 ರನ್ ಗಳಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News