ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ: ಸರಕಾರದ ವಿರುದ್ಧ ಘೋಷಣೆ

Update: 2020-09-28 03:48 GMT

ಚಿಕ್ಕಮಗಳೂರು, ಸೆ.28: ಕೇಂದ್ರ ಮತ್ತು ರಾಜ್ಯ ಸರಕಾರಗಳು ಜಾರಿಗೆ ತರಲು ಉದ್ದೇಶಿಸಿರುವ ಭೂ ಸುಧಾರಣೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ಜನವಿರೋಧಿ ಕಾಯ್ದೆಗಳ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದಲ್ಲೂ ಬೆಳಗ್ಗೆ ಪ್ರತಿಭಟನೆ ನಡೆಯಿತು.

ನಗರದ ಹನುಮಂತಪ್ಪವೃತ್ತದಲ್ಲಿ ರೈತ ಸಂಘಟನೆ, ಕರ್ನಾಟಕ ರಕ್ಷಣಾ ವೇದಿಕೆ, ಸಿಪಿಎಂ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಂದ್ ಕರೆ ಹಿನ್ನೆಲೆಯಲ್ಲಿ ನಗರದಲ್ಲಿ ಹೆಚ್ಚಿನ ಆಟೋ ರಿಕ್ಷಾಗಳು ರಸ್ತೆಗಿಳಿದಿಲ್ಲ. ಕೆಲವು ಅಂಗಡಿ-ಮುಂಗಟ್ಟುಗಳು ಮುಚ್ಚಿವೆ. ಕೆಲವೆಡೆ ತೆರೆದಿರುವ ಅಂಗಡಿಗಳನ್ನು ಮುಚ್ಚುವಂತೆ ಪ್ರತಿಭಟನಾಕಾರರು ಒತ್ತಾಯಿಸುತ್ತಿರುವ ದೃಶ್ಯಗಳು ಕಂಡುಬರುತ್ತಿವೆ.

ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News