ಕರ್ನಾಟಕ ಬಂದ್: ರಾಜ್ಯಾದ್ಯಂತ ಉತ್ತಮ ಪ್ರತಿಕ್ರಿಯೆ

Update: 2020-09-28 05:22 GMT

ಬೆಂಗಳೂರು, ಸೆ.28: ಕೃಷಿ, ಕಾರ್ಮಿಕ ಮತ್ತು ಎಪಿಎಂಸಿ ಕಾಯ್ದೆಗಳ ತಿದ್ದುಪಡಿ ಮಸೂದೆಗಳ ಜಾರಿಗೆ ಮುಂದಾಗಿರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕ್ರಮವನ್ನು ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಇಂದಿನ 'ಕರ್ನಾಟಕ ಬಂದ್'ಗೆ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರು, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ- ಧಾರವಾಡ, ಕಲಬುರಗಿ ಸೇರಿದಂತೆ ಹಲವು ಕಡೆಗಳಲ್ಲಿ ರೈತರು, ಕನ್ನಡಪರ ಸಂಘಟನೆಗಳು ಭಾರೀ ಪ್ರತಿಭಟನೆ ನಡೆಸಿ ಸರಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

ಇನ್ನು ಕೆಲವೆಡೆ ಪೋಲಿಸರು ಪ್ರತಿಭಟನೆಗೆ ಅಡ್ಡಿಪಡಿಸಿದ ಘಟನೆಗಳು ವರದಿಯಾಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಡೆ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News