ಚಾಮರಾಜನಗರದಲ್ಲಿ ಕರ್ನಾಟಕ ಬಂದ್ ಗೆ ಉತ್ತಮ ಪ್ರತಿಕ್ರಿಯೆ: ರೈತರಿಂದ ಪ್ರತಿಭಟನೆ

Update: 2020-09-28 05:56 GMT

ಚಾಮರಾಜನಗರ, ಸೆ.28: ಕರ್ನಾಟಕ ತಮಿಳುನಾಡು ಮತ್ತು ಕೇರಳ ರಾಜ್ಯಗಳ ಸಂಪರ್ಕ ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ರೈತ ಸಂಘಟನೆಗಳು ಕರೆ ನೀಡಲಾಗಿರುವ ಸ್ವಯಂ ಘೋಷಿತ ಕರ್ನಾಟಕ ಬಂದ್ ಯಶ್ವಸಿಯತ್ತ ಸಾಗಿದೆ.

ಚಾಮರಾಜನಗರದ ಪಟ್ಟಣದ ಹೃದಯಭಾಗವಾಗಿರುವ ಶ್ರೀ ಭುವನೇಶ್ವರಿ ವೃತ್ತದಲ್ಲಿ ಬೆಳಗ್ಗೆ ರೈತ ಸಂಘಟನೆ,, ಕನ್ನಡ ಪರ ಸಂಘಟನೆಗಳು, ಪ್ರಗತಿ ಪರ ಸಂಘಟನೆ ಹಾಗೂ ಎಸ್.ಡಿಪಿಐ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟಯರ್ ಸುಟ್ಟು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಚಾಮರಾಜನಗರ ಜಿಲ್ಲೆಯ ಯಳಂದೂರು, ಕೊಳ್ಳೇಗಾಲ, ಗುಂಡ್ಲುಪೇಟೆ ಮತ್ತು ಹನೂರು ತಾಲೂಕಿನಲ್ಲೂ ಸಹ ಕರ್ನಾಟಕ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕ ಅಂಗಡಿ ಮುಂಗಟ್ಟುಗಳು ಬಾಗಿಲು ಹಾಕಿ ಬಂದ್ ಗೆ ಸಹಕರಿಸಿದ್ದವು. ಸಾರ್ವಜನಿಕರ ಸಂಚಾರ ವಿರಳವಾಗಿತ್ತು..ಖಾಸಗಿ ಬಸ್‌ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದವು. ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News