ವಿಶ್ವ ಹಿಂದೂ ಪರಿಷತ್ ಕಾಸರಗೋಡು ಗ್ರಾಮಾಂತರ ಜಿಲ್ಲಾಧ್ಯಕ್ಷ ಅಂಗಾರ ನಿಧನ

Update: 2020-09-28 06:00 GMT

ಕಾಸರಗೋಡು, ಸೆ.28: ವಿಶ್ವ ಹಿಂದೂ ಪರಿಷತ್ ಕಾಸರಗೋಡು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ, ಉಪ್ಪಳ ಬಾಯಾರಿನ ಪೆರ್ವೋಡಿ ನಿವಾಸಿ  ಅಂಗಾರ ಶ್ರೀಪಾದ (69) ಅಲ್ಪಕಾಲದ ಅಸೌಖ್ಯದಿಂದ ಸೋಮವಾರ ಬೆಳಗ್ಗೆ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಬಾಯಾರು ಸಹಕಾರಿ ಬ್ಯಾಂಕ್ ನ ನಿರ್ದೇಶಕರೂ ಆಗಿದ್ದ ಇವರು ಈ ಹಿಂದೆ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದರು. ಕಳೆದ ಹತ್ತು ವರ್ಷಗಳಿಂದ ವಿಶ್ವ ಹಿಂದೂ ಪರಿಷತ್ ನ ಕಾಸರಗೋಡು ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News