ಶಾಸಕ ಎಚ್.ಕೆ.ಪಾಟೀಲ್‌ರಿಗೆ ಕೊರೋನ ಸೋಂಕು

Update: 2020-09-28 06:08 GMT

ಬೆಂಗಳೂರು, ಸೆ.28: ಮಾಜಿ ಸಚಿವ, ಹಾಲಿ ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಎಚ್.ಕೆ.ಪಾಟೀಲ್, ತಾನು ಕೊರೋನ ಸೋಂಕಿಗೆ ಪಾಸಿಟಿವ್ ಆಗಿದ್ದೇನೆ. ಸದ್ಯ ಯಾವುದೇ ರೋಗಲಕ್ಷಣಗಳು ಇಲ್ಲವಾಗಿದ್ದು, 10 ದಿನಗಳ ಕಾಲ ಸ್ವಯಂ ಕ್ವಾರಂಟೈನ್‌ಗೆ ಒಳಗಾಗುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆಯಿಂದ ಶೀಘ್ರವೇ ಚೇತರಿಸಿಕೊಳ್ಳುವ ವಿಶ್ವಾಸವಿದೆ. ಈ ನಡುವೆ ಕಳೆದೆರಡು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವ ವ್ಯಕ್ತಿಗಳು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ವಹಿಸುವಂತೆ ಕೋರುತ್ತೇನೆ ಎಂದು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News